ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಿದ ಬಳಿಕ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುತ್ರಿ ವಿಜೇತಾ ಅನಂತ್ ಕುಮಾರ್ ಅವರು ಮಾಡಿರುವ ಟ್ವೀಟ್ ವೊಂದು ರಾಜಕೀಯ ಪಡಸಾಲೆಯಲ್ಲಿ ಸಖತ್ ಸದ್ದು ಮಾಡುತ್ತಿದೆ.


COMMERCIAL BREAK
SCROLL TO CONTINUE READING

ಹೌದು, ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿರುವ ವಿಜೇತಾ ಅನಂತ್ ಕುಮಾರ್ ಅವರು ಜೆಡಿಎಸ್ ಕುರಿತಾಗಿ ಮಾಡಿರುವ ಟ್ವೀಟ್ ವೊಂದು ತೀವ್ರ ಕುತೂಹಲ ಕೆರಳಸಿದೆ. ‘ಕರ್ನಾಟಕದ ರಾಜಕೀಯ ಏಕೆ ಕುತೂಹಲಕರವಾಗಿದೆ ಗೊತ್ತಾ..? ಏಕೆಂದರೆ ಜೆಡಿಎಸ್ ಇನ್ನು ಬಲಿಷ್ಠ ರಾಜಕೀಯ ಪಕ್ಷವಾಗಿ ಉಳಿದಿದೆ’ ಅಂತಾ ತಮ್ಮ ಟ್ವೀಟರ್ ಖಾತೆಯಲ್ಲಿ 2 ಸಾಲುಗಳ ಅಭಿಪ್ರಾಯವನ್ನು ಬರೆದುಕೊಂಡಿದ್ದಾರೆ. ಜೆಡಿಎಸ್ ಬಗ್ಗೆ ಅವರು ಮಾಡಿರುವ ಟ್ವೀಟ್ ನ ಉದ್ದೇಶವೇನು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಟ್ವೀಟ್ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಅನೇಕ ಜೆಡಿಎಸ್ ಕಾರ್ಯಕರ್ತರು ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದು, ‘ನೀವು ಪ್ರಾದೇಶಿಕ ಪಕ್ಷದ ಬೆಳವಣಿಗೆಗೆ ಕೈಜೋಡಿಸಬೇಕು. ಜೆಡಿಎಸ್ ಗೆ ಸೇರಿ ಮುಂದಿನ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರನ್ನು ಗೆಲ್ಲಿಸಿ ಮುಖ್ಯಮಂತ್ರಿ ಮಾಡಬೇಕು’ ಎಂದು ಕಾಮೆಂಟ್ ಮಾಡಿದ್ದಾರೆ.


ನೂತನ ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ, ಅಮಿತ್ ಶಾ ಅಭಿನಂದನೆ: ಬಿಎಸ್​ವೈ ಬಗ್ಗೆ ಹೊಗಳಿಕೆ...


ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರದ  ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ನೀಡುವ ಬದಲು ತೇಜಸ್ವಿ ಸೂರ್ಯಗೆ ಬಿಜೆಪಿ ಟಿಕೆಟ್ ನೀಡಿತ್ತು. ಇದರಿಂದ ಅನಂತ್ ಕುಮಾರ್ ಅಭಿಮಾನಿಗಳಿಗೆ ತುಂಬಾ ಬೇಸರವಾಗಿತ್ತು. ಈ ಬೆಳವಣಿಗೆ ಹಿನ್ನೆಲೆ ತೇಜಸ್ವಿನಿ ಅನಂತ್ ಕುಮಾರ್ ಅವರು ರಾಜಕೀಯದಿಂದ ತಟಸ್ಥರಾಗಿ ಉಳಿದಿದ್ದಾರೆ. ವಿಜೇತಾ ಅನಂತ್ ಕುಮಾರ್ ಅವರ ಟ್ವೀಟ್ ವ್ಯಾಪಕ ಚರ್ಚೆಗೆ ಕಾರಣವಾಗಿವೆ.


ಇದನ್ನೂ ಓದಿ: ನೂತನ ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ನೀಡಿದ ಸಲಹೆ ಏನು ಗೊತ್ತಾ..?


ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ‘ಅನಂತ್ ಕುಮಾರ್ ಪತ್ನಿ, ಮಗಳು ಜೆಡಿಎಸ್ ಗೆ ಬಂದರೆ ಸ್ವಾಗತ. ನಮ್ಮ ಪಕ್ಷದಲ್ಲಿ ಅವರಿಗೆ ಉತ್ತಮ ಗೌರವ ಕೊಡುತ್ತೇವೆ. ಬಿಜೆಪಿ ಅವರಿಗೆ ಸರಿಯಾದ ಗೌರವ ಸಿಕ್ಕಿಲ್ಲ. ಹೀಗಾಗಿ ನಮ್ಮ ಪಕ್ಷಕ್ಕೆ ಬಂದರೆ ಸಂತೋಷ, ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಗೌರವಿಸುತ್ತೇವೆ. ಎಲ್ಲಾ ಜೆಡಿಎಸ್ ಕಾರ್ಯಕರ್ತರ ಪರವಾಗಿ ಅವರಿಗೆ ಅಭಿನಂದನೆ’ ಅಂತಾ ತಿಳಿಸಿದ್ದಾರೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ