ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಜೆಡಿಎಸ್ ನಿಂದ ಗಂಭೀರ ಭ್ರಷ್ಟಾಚಾರದ ಆರೋಪ

ಕೇಂದ್ರ ಸರಕಾರದ ಅಧೀನದಲ್ಲಿರುವ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಯಲ್ಲಿ ಹುದ್ದೆ ಕೊಡಿಸಲು ಹಾಗೂ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್ ಎಂ ಸಿ)ಯ ಸದಸ್ಯತ್ವ ಕೊಡಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿ ಲಂಚದ ಹಣ ಪಡೆದಿದೆ ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡರು ಗಂಭೀರ ಆರೋಪ ಮಾಡಿದರು.

Written by - Prashobh Devanahalli | Edited by - Manjunath Naragund | Last Updated : Feb 7, 2023, 07:18 PM IST
  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಜೆಡಿಎಸ್ ನಾಯಕ ಭೋಜೇಗೌಡರ ಗಂಭೀರ ಭ್ರಷ್ಟಾಚಾರದ ಆರೋಪ
  • ಬ್ಯಾಂಕ್ ದಾಖಲೆ ಬಿಡುಗಡೆ ಮಾಡಿದ ವಿಧಾನ ಪರಿಷತ್ ಸದಸ್ಯ ಭೋಜೇಗೌಡ
  • ಏಮ್ಸ್ ಹುದ್ದೆ, ಎನ್ ಎಂಸಿ ಸದಸ್ಯತ್ವ ಕೊಡಿಸುವುದಾಗಿ ಆಮಿಷ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಜೆಡಿಎಸ್ ನಿಂದ ಗಂಭೀರ ಭ್ರಷ್ಟಾಚಾರದ ಆರೋಪ

ಬೆಂಗಳೂರು: ಕೇಂದ್ರ ಸರಕಾರದ ಅಧೀನದಲ್ಲಿರುವ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಯಲ್ಲಿ ಹುದ್ದೆ ಕೊಡಿಸಲು ಹಾಗೂ ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್ ಎಂ ಸಿ)ಯ ಸದಸ್ಯತ್ವ ಕೊಡಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿ ಲಂಚದ ಹಣ ಪಡೆದಿದೆ ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡರು ಗಂಭೀರ ಆರೋಪ ಮಾಡಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು ಪ್ರಹ್ಲಾದ್ ಜೋಷಿಯವರು ನಮ್ಮ ಪಕ್ಷದ ಬಗ್ಗೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಕುರಿತು ಲಘುವಾಗಿ ಮಾತಾಡಿದ್ದಾರೆ. ಆದರೆ, ತಮ್ಮ ಕಚೇರಿಯಲ್ಲಿ ನಡೆದಿರುವ ಈ ಕಳ್ಳ ವ್ಯವಹಾರದ ಬಗ್ಗೆ ಕೇಂದ್ರ ಸಚಿವರು ಏನು ಹೇಳುತ್ತಾರೆ ಎಂದು ಅವರು ಪ್ರಶ್ನಿಸಿದರು.ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಏನು ನಡೆಯುತ್ತಿದೆ ಎನ್ನುವುದು ರಾಜ್ಯಕ್ಕೆ ಗೊತ್ತಾಗಬೇಕಿದೆ. ತಾವು ಶುದ್ಧರು, ಪರಿಶುದ್ಧರು ಎಂದು ಬೊಬ್ಬಿರಿದು ಹೇಳುವ ಅವರ ಕರ್ಮಕಾಂಡ ಇಲ್ಲಿದೆ ನೋಡಿ ಎಂದು ಹೇಳಿದ ಅವರು, ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಕೇಂದ್ರದ ಸರಕಾರದ  ಹುದ್ದೆಗಳನ್ನು ಕಾಸಿಗಾಗಿ ಬಿಕರಿಗಿಟ್ಟ ಕೆಲ ದಾಖಲೆಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

ಇದನ್ನೂ ಓದಿ : ಟಿ 20 ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾದ ಈ ಸ್ಟಾರ್ ಆಟಗಾರ..! 

ಹಣವನ್ನು ಎರಡು ಬಾರಿ ಬ್ಯಾಂಕ್ ಖಾತೆಗೆ ಹಾಕಿಸಿಕೊಳ್ಳಲಾಗಿದೆ ಎಂದು ಆರೋಪ ಮಾಡಿದ ಭೋಜೇಗೌಡರು, ಅದಕ್ಕೆ ಸಂಬಂಧಿತ ಬ್ಯಾಂಕ್ ಖಾತೆಯ ವಿವರಗಳನ್ನು ಹಾಗೂ ಅಂದಿನ ಕೇಂದ್ರದ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಪ್ರಹ್ಲಾದ್ ಜೋಷಿ ಅವರಿಗೆ ಬರೆದಿದ್ದ ಪತ್ರವೊಂದನ್ನು ಕೂಡ ಬಿಡುಗಡೆ ಮಾಡಿದರು.ಕೇಂದ್ರದ ಆರೋಗ್ಯ ಸಚಿವರು ಮಾಡಿಕೊಟ್ಟ ಕೆಲಸಕ್ಕೆ ಪ್ರತಿಯಾಗಿ ಅವರ ಸಂಪುಟ ಸಹೋದ್ಯೋಗಿ ಆಗಿದ್ದ ಪ್ರಹ್ಲಾದ್ ಜೋಷಿ ಅವರ ಕಚೇರಿಗೆ ಹಣ ತಲುಪಿಸಲಾಗಿದೆ.

ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಒತ್ತಾಯ ಮಾಡಿದ ಅವರು, ಈ ಹಣವನ್ನು ಯಾರು ಯಾರಿಗೆ ಕೊಟ್ಟಿದ್ದಾರೆ. ಕಾಸಿಗಾಗಿ ಹುದ್ದೆ ಮಾರಾಟ ಮಾಡಿಕೊಂಡ ಈ ಬಹುಕೋಟಿ ಹಗರಣದ ನಿಜವಾದ ಕಿಂಗ್ ಪಿನ್ ಯಾರು? ಇದರಲ್ಲಿ ಪ್ರಹ್ಲಾದ್ ಜೋಷಿ ಅವರ ಪಾತ್ರ ಏನು ಎಂಬುದು ತನಿಖೆಯಿಂದ ಹೊರಬರಬೇಕಿದೆ ಎಂದು ಹೇಳಿದರು.ಒಟ್ಟು ಎರಡೂವರೆ ಕೋಟಿ ರೂಪಾಯಿ ಹಣ ಸಂದಾಯ ಆಗಿದೆ. ಈ ಹಣವನ್ನು ಯಾರಿಗೋಸ್ಕರ, ಯಾರು, ಯಾರಿಂದ ಹಣ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ಪ್ರಹ್ಲಾದ್ ಜೋಶಿ ಉತ್ತರ ಕೊಡಬೇಕಿದೆ. ಅವರ ಕಚೇರಿಗೇ ಹಣ ಹೋಗಿದೆ ಎಂದು ಭೋಜೆಗೌಡರು ನೇರ ಆರೋಪ ಮಾಡಿದರು.

ಇದನ್ನೂ ಓದಿ: ಅಧಿಕಾರದಿಂದ ಕಿತ್ತು ಕೆಳಗಿಳಿಸಿದರೂ ಕಾಂಗ್ರೆಸ್ ನಾಯಕರ ಮದ ಇಳಿಯುತ್ತಿಲ್ಲ: ಬಿಜೆಪಿ ಟೀಕೆ

ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ನಲ್ಲಿ ಮೆಂಬರ್ ಮಾಡ್ತೀವಿ ಅಂತ ಹಣ ಪಡೆದಿದ್ದಾರೆ. ಹಾಗೆಯೇ, ಏಮ್ಸ್ ಡೈರಕ್ಡರ್ ಮಾಡ್ತೀನಿ ಅಂತ ಹಣ ಪಡೆಯಲಾಗಿದೆ. ಅಂದಿನ ಕೇಂದ್ರದ ಆರೋಗ್ಯ ಸಚಿವರು ಪ್ರಹ್ಲಾದ್ ಜೋಷಿ ಅವರಿಗೆ ಬರೆದಿರುವ ಪತ್ರಕ್ಕೂ ಹಾಗೂ ಈ ಹಣ ಸಂದಾಯಕ್ಕೂ ಇರುವ ಲಿಂಕ್ ಬಗ್ಗೆ ತನಿಖೆ ನಡೆಯಬೇಕು ಎಂದು ಅವರು ಆಗ್ರಹಪಡಿಸಿದರು.ಇದೇ ಪ್ರಕರಣದ ಬಗ್ಗೆ ಇನ್ನೂ ಹಲವಾರು ದಾಖಲೆಗಳು ಇವೆ. ಈ ದಾಖಲೆಗಳು ಕೇವಲ ಸ್ಯಾಂಪಲ್ ಮಾತ್ರ. ಇನ್ನೂ ಸ್ವಲ್ಪ ದಿನದಲ್ಲೇ ದಾಖಲೆ ಬಿಡುಗಡೆ ಮಾಡ್ತೀವಿ ಎಂದು ಅವರು ತಿಳಿಸಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರಮೇಶ್ ಗೌಡ ಈ ಸಂದರ್ಭದಲ್ಲಿ ಇದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News