ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸಿಕ್ಕ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಜೆಡಿಎಸ್ ಪಕ್ಷದಲ್ಲಿ ಮಾಡಬೇಕಿರುವ ಬದಲಾವಣೆಗಳು ಹಾಗೂ ತರಬೇಕಿರುವ ಸುಧಾರಣೆಗಳ ಬಗ್ಗೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದೆವು. ‘ಪಂಚರತ್ನ ರಥಯಾತ್ರೆ’ಗೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆದರೆ ಫಲಿತಾಂಶ ನಮಗೆ ಅತೀವ ನಿರಾಶೆ ಉಂಟು ಮಾಡಿದೆ ಎಂದು ಕುಮಾಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: "ಪ್ರಜಾಪ್ರಭುತ್ವ ವ್ಯವಸ್ಥೆಗೆ ಪ್ರಧಾನಮಂತ್ರಿಗಳು ಅಪಚಾರ ಎಸಗಿದ್ದಾರೆ"


ಈ ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಮಹತ್ವದ ಬದಲಾವಣೆ ಮಾಡಲಿದ್ದೇವೆ ಎಂದು ಎಚ್‍ಡಿಕೆ ಹೇಳಿದರು.


ನವೆಂಬರ್‍ನಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ‘ನಾನು ರಾಜಕೀಯದಲ್ಲಿ ಬೆಳವಣಿಗೆಗಳು ಆಗುತ್ತವೆ ಎಂದಿದ್ದೆ ಅಷ್ಟೇ‌. ಸರ್ಕಾರ ಹೋಗುತ್ತೆ ಅಂತಾ ಹೇಳಿದ್ದೆನಾ‌? ಎಂದು ಮರು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.


ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಸಚಿವಾಕಾಂಕ್ಷಿಗಳ ಬೆಂಬಲಿಗರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.