Inauguration of Parliament House: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಜರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದ ಸಹಮತ!

Inauguration Of The Parliament House: ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು.

Written by - Zee Kannada News Desk | Last Updated : May 26, 2023, 02:36 PM IST
  • ಸಂಸತ್ ಭವನ ಲೋಕಾರ್ಪಣೆ ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
  • ದೇವೇಗೌಡರ ನೇತೃತ್ವದಲ್ಲಿ ಬೃಹತ್ ರೈತಪರ ಹೋರಾಟಕ್ಕೆ ನಿರ್ಣಯ ಅಂಗೀಕಾರ
  • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಜರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದ ಸಹಮತ
Inauguration of Parliament House: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಜರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದ ಸಹಮತ! title=

ಬೆಂಗಳೂರು: ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು.

ಇದನ್ನೂ ಓದಿ: ಹೊಸನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ

ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದೇಶದ ಹಲವಾರು ರಾಜಕೀಯ ಪಕ್ಷಗಳು ಬಹಿಷ್ಕಾರ ಹಾಕಿರುವ ಹಿನ್ನೆಲೆಯಲ್ಲಿ ಈ ವಿಷಯದ ಬಗ್ಗೆ ಕಾರ್ಯಕಾರಿಣಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಹಾಲಿ ಪ್ರಧಾನಿಗಳು ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಜರಾಗುವುದು ತಪ್ಪೇನಲ್ಲ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನ ಅಂತರ ಕಾಯ್ದುಕೊಳ್ಳಲಾಗುವುದು ಹಾಗೂ ಪಕ್ಷದ ಸೈದ್ಧಾಂತಿಕ ನಿಲುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕಾರ್ಯಕಾರಿಣಿ ಸ್ಪಷ್ಟಪಡಿಸಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಶಾದಿ.ಕಾಮ್ ನಲ್ಲಿ ಪರಿಚಯ,  ಓಯೋದಲ್ಲಿ ಮಜಾ: ಕೊನೆಗೆ ಯುವತಿಗೆ ಕೈಕೊಟ್ಟು ಬೇರೆ ನಿಖಾ ಆದ ಐನಾತಿ!

ರೈತರ ಪರವಾಗಿ ಮಾಜಿ ಪ್ರಧಾನಿ ಧ್ವನಿ

ದೇಶದ ಉದ್ದಗಲಕ್ಕೂ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸೂಕ್ತ ಬೆಲೆ, ಸಬ್ಸಿಡಿ, ರಸಗೊಬ್ಬರ ಸಮಸ್ಯೆ,  ಇತ್ಯಾದಿ ಸೌಲಭ್ಯ ಸಿಗದೆ ಕಂಗಾಲಾಗಿದ್ದಾರೆ. ಹೀಗಾಗಿ ದೇಶಾದ್ಯಂತ ರೈತರ ಪರವಾಗಿ ಬೃಹತ್ ಹೋರಾಟವನ್ನು ದೇವೇಗೌಡರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ರೂಪಿಸಬೇಕು ಎಂದು ಕೇರಳದ ಜೆಡಿಎಸ್ ಪಕ್ಷದ ಹಿರಿಯ ಶಾಸಕರು ಹಾಗೂ ಸಚಿವರೂ ಆಗಿರುವ ಕೃಷ್ಣನ್ ಕುಟ್ಟಿ ಅವರು ನಿರ್ಣಯ ಮಂಡಿಸಿದರು. ಈ ನಿರ್ಣಯಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದ ಒಪ್ಪಿಗೆ ನೀಡಿತು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News