ಬೆಂಗಳೂರು: ಮಾಜಿ ಶಾಸಕ ವೈಎಸ್‍ವಿ ದತ್ತಾ ಜೆಡಿಎಸ್ ಪಕ್ಷ ತೊರೆಯಲು ಸಜ್ಜಾಗಿದ್ದಾರೆ. ಈ ಕುರಿತು ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಅವರು ಕಾಂಗ್ರೆಸ್ ಸೇರುವುದಾಗಿ ಹೇಳಿದ್ದರು. ದೊಡ್ಡಗೌಡರ ‘ಮಾನಸಪುತ್ರ’ನೆಂದೇ ಖ್ಯಾತಿಯಾಗಿದ್ದ ವೈಎಸ್‍ವಿ ದತ್ತಾ ಕಾಂಗ್ರೆಸ್ ಸೇರುತ್ತಿರುವ ವಿಚಾರವಾಗಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ಕಿಡಿಕಾರಿದೆ.
‘ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ‘ಮಾನಸಪುತ್ರ’ ಎಂದೇ ಖ್ಯಾತಿ ಆಗಿರುವ ವೈಎಸ್‍ವಿ ದತ್ತಾ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ, ‘ಕೈ’ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ’ ಅಂತಾ ಜೆಡಿಎಸ್ ಟ್ವೀಟ್ ಮಾಡಿದೆ.
ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿಗಳು ಆಗಿರುವ ಶ್ರೀ @H_D_Devegowdaರ ' ಮಾನಸಪುತ್ರ ' ಎಂದೇ ಖ್ಯಾತಿ ಆಗಿರುವ ಶ್ರೀ @YSV_Datta ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ, ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ.
1/5— Janata Dal Secular (@JanataDal_S) January 8, 2023
ಇದನ್ನೂ ಓದಿ: ಹಣ ಕೊಡಲಿಲ್ಲ ಅಂತಾ ಮಹಿಳೆಯ ಖಾಸಗಿ ವಿಡಿಯೋ ಹರಿಬಿಟ್ಟು ವಿಕೃತಿ: ಆರೋಪಿ ಬಂಧನ
‘ಬಹುತೇಕ ಕಡೆ ದೇವೇಗೌಡರ 'ಮಾನಸಪುತ್ರ' ಜೆಡಿಎಸ್ ತೊರೆದು ಹೋಗುತ್ತಿದ್ದಾರೆಂದು ಪ್ರಚಾರ ಮಾಡಲಾಗುತ್ತಿದೆ. 'ಮಾನಸಪುತ್ರ' ಎನ್ನುವ ಪದವೇ ಹೆಚ್ಚು ಸದ್ದು ಮಾಡುತ್ತಿದೆ. ದತ್ತಾ ಅವರು ಗೌಡರಿಗೆ ಮಾನಸಪುತ್ರ ಪುತ್ರರಾಗಿದ್ದರೋ ಇಲ್ಲವೋ ಗೊತ್ತಿಲ್ಲ, ಆದರೆ ದೇವೇಗೌಡರು ಮಾತ್ರ ನಿಜಕ್ಕೂ ದತ್ತಾ ಅವರನ್ನು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು’ ಎಂದು ಜೆಡಿಎಸ್ ಹೇಳಿದೆ.
ಅಂತಹ @YSV_Datta, ಮಾನಸಪುತ್ರನೆಂದು ಖ್ಯಾತಿಯ ಜತೆಗೆ ಸಕಲವನ್ನೂ ಸಂಪಾದನೆ ಮಾಡಿಕೊಂಡ ಮೇಲೆ ಸಲುಹಿದ, ಕಷ್ಟ ಬಂದಾಗ ಕಾಪಾಡಿದ, ಕಠಿಣ ಸಂದರ್ಭಗಳಲ್ಲಿ ಕಣ್ರೆಪ್ಪೆಯಂತೆ ಪೊರೆದ, ಅನೇಕ ಸಲ ಜನ್ಮಕೊಟ್ಟ ತಂದೆಗಿಂತ ಗಟ್ಟಿಯಾಗಿ ಜತೆಗೆ ನಿಂತು ಮುಳುಗೇ ಹೋಗುತ್ತಿದ್ದ ಬದುಕನ್ನು ಬದುಕಿಸಿಕೊಟ್ಟ 'ಮಾನಸ ತಂದೆ' ಯನ್ನು ಮರೆತು, ತೊರೆಯುತ್ತಿದ್ದರೆ?
3/5— Janata Dal Secular (@JanataDal_S) January 8, 2023
‘ಇಂತಹ ವೈಎಸ್‍ವಿ ದತ್ತಾ ‘ಮಾನಸ ಪುತ್ರ’ನೆಂದು ಖ್ಯಾತಿಯ ಜೊತೆಗೆ ಸಕಲವನ್ನೂ ಸಂಪಾದನೆ ಮಾಡಿಕೊಂಡ ಮೇಲೆ ಸಲುಹಿದ, ಕಷ್ಟ ಬಂದಾಗ ಕಾಪಾಡಿದ, ಕಠಿಣ ಸಂದರ್ಭಗಳಲ್ಲಿ ಕಣ್ರೆಪ್ಪೆಯಂತೆ ಪೊರೆದ, ಅನೇಕ ಸಲ ಜನ್ಮಕೊಟ್ಟ ತಂದೆಗಿಂತ ಗಟ್ಟಿಯಾಗಿ ಜೊತೆಗೆ ನಿಂತು ಮುಳುಗೇ ಹೋಗುತ್ತಿದ್ದ ಬದುಕನ್ನು ಬದುಕಿಸಿಕೊಟ್ಟ ‘ಮಾನಸ ತಂದೆ’ಯನ್ನು ಮರೆತು, ತೊರೆಯುತ್ತಿದ್ದರೆ?’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: OMG: ರಾಜ್ಯದ ಜನರಲ್ಲಿ ಹೆಚ್ಚಿದ ವಿಚಿತ್ರ ಕ್ಯಾನ್ಸರ್ ಖಾಯಿಲೆ!
‘ಮಾನಸ ಪುತ್ರ’ನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ದೇವೇಗೌಡರು. ನಂಬಿ ಪಕ್ಕದಲ್ಲಿಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ ಎಲ್ಲವನ್ನೂ ಧಾರೆ ಎರೆದರು. ಆದರೆ ಇವತ್ತು ಆ ‘ಮಾನಸ ಪುತ್ರ’ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ಗೌಡರಿಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಸೇರುತ್ತಿದ್ದಾರೆ’ ಎಂದು ಜೆಡಿಎಸ್ ಕಿಡಿಕಾರಿದೆ.
ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ, ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ.. ಢೋಂಗಿ ಮಾನಸಪುತ್ರರನ್ನು ಮರೆ ಲೇಸು. ಅಲ್ಲವೇ?
5/5— Janata Dal Secular (@JanataDal_S) January 8, 2023
‘ಮಾನಸ ಪುತ್ರ’ನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂತಹ ‘ಮಾನಸ ಪುತ್ರ’ನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ.. ಢೋಂಗಿ ಮಾನಸಪುತ್ರರನ್ನು ಮರೆ ಲೇಸು. ಅಲ್ಲವೇ?’ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.