ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಸಂದರ್ಭದಲ್ಲಿ ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಯಲ್ಲಿ ಬೀಡುಬಿಟ್ಟಿರುವುದಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವ ಜೆಡಿಎಸ್ ಪಕ್ಷ ಬಿಎಸ್‌ವೈ ರೋಮ್ ದೊರೆಗೆ ಹೋಲಿಸಿ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

ಈ ಕುರಿತು ತನ್ನ ಅಧಿಕೃತ ಟ್ವಿಟ್ಟರ್ ಮೂಲಕ ಟ್ವೀಟ್ ಮಾಡಿರುವ ಜೆಡಿಎಸ್, ರೋಮ್ ಹೊತ್ತಿ ಉರಿಯುವಾಗ  ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕದಲ್ಲಿ ‌ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ. ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ.. ಎಂದು ವ್ಯಂಗ್ಯವಾಡಿದೆ.



ಇದರ ಬೆನ್ನಲ್ಲೇ ಇನ್ನೊಂದು ಟ್ವೀಟ್ ಮಾಡಿದ್ದು, ಸರ್ಕಾರ ಕಾಣೆಯಾಗಿದೆ ಎಂದು ಕುಹಕವಾಡಿದೆ.