ಕನ್ನಡಿಗರ ನಾಡಿನಲ್ಲಿ ಕನ್ನಡ ಧಿಕ್ಕರಿಸಿ ಬಿಜೆಪಿ ಹಿಂದಿ ದಿವಸ ಆಚರಿಸುತ್ತಿದೆ : ಹೆಚ್‌.ಡಿ.ಕೆ

ಕೇಂದ್ರ ಸರ್ಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Written by - Sowmyashree Marnad | Edited by - Krishna N K | Last Updated : Sep 14, 2022, 04:02 PM IST
  • ಹಿಂದಿ ದಿವಸ ವಿರೋಧಿಸಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ
  • ಕನ್ನಡ ಶಾಲು ಧರಿಸಿ, ಕಪ್ಪುಪಟ್ಟಿ ಕಟ್ಟಿಕೊಂಡು ಗಾಂಧಿ ಪ್ರತಿಮೆ ಎದುರು ಧರಣಿ
  • ಸಿಎಂ ಇಬ್ರಾಹಿಂ, ಸೇರಿದಂತೆ ಹಲವು ಜೆಡಿಎಸ್ ಶಾಸಕರು ಭಾಗಿ
ಕನ್ನಡಿಗರ ನಾಡಿನಲ್ಲಿ ಕನ್ನಡ ಧಿಕ್ಕರಿಸಿ ಬಿಜೆಪಿ ಹಿಂದಿ ದಿವಸ ಆಚರಿಸುತ್ತಿದೆ : ಹೆಚ್‌.ಡಿ.ಕೆ title=

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ನಡೆಸಿದ ಪ್ರತಿಭಟನೆ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಕೇಂದ್ರ ಸರ್ಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ನೇರವಾಗಿ ಆರೋಪಿಸಿದರು.

ಇದನ್ನೂ ಓದಿ: ಮಗುವಿನ ಹುಡುಕಾಟದಲ್ಲಿದ್ದಾರೆ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ : ಯಾಕೆ ಗೊತ್ತಾ..?

ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷ ಜಾತ್ಯತೀತ ಜನತಾದಳದ ವಿರೋಧ ಇದೆ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರೀಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರ್ಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಓಡೆದಂತೆ. ಅವರು ಕೇಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿ ಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಭಾರದೆ ಹಿಂದಿ  ಭಾಷೆಯ ವಿಚಾರ ಸರಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಅವರು ಕಿಡಿ ಕಾರಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News