ಹಿಂದಿ ಹೇರಿಕೆಗೆ ಮುನ್ನುಡಿ ಬರೆದಿದ್ದೇ ಕಾಂಗ್ರೆಸ್: ಜೆಡಿಎಸ್

ಹಿಂದಿಗೆ ನೀಡಿರುವ ವಿಶೇಷ ಸ್ಥಾನಮಾನ ತೆಗೆದುಹಾಕುತ್ತೇವೆ ಎಂದು ಕಾಂಗ್ರೆಸ್  ಘೋಷಣೆ ಮಾಡಿ ತಮ್ಮ ಬದ್ಧತೆ ಪ್ರದರ್ಶಿಸಲಿ ಎಂದು ಜೆಡಿಎಸ್ ಸವಾಲು ಹಾಕಿದೆ.

Written by - Zee Kannada News Desk | Last Updated : Apr 9, 2022, 08:18 PM IST
  • ಇಂದು ರಾಜ್ಯದ ಕಾಂಗ್ರೆಸ್ ನಾಯಕರು ಪುಂಖಾನುಪುಂಖವಾಗಿ ಹಿಂದಿ ಹೇರಿಕೆ ವಿಚಾರದಲ್ಲಿ ಭಾಷಣ ಬಿಗಿಯುತ್ತಿದ್ದಾರೆ
  • ಒಂದು ವೇಳೆ ಕಾಂಗ್ರೆಸ್‍ನವರು ಅಧಿಕಾರಕ್ಕೆ ಬಂದರೆ ಮತ್ತೆ ಹಿಂದಿ ಹೇರಿಕೆಯನ್ನು ಮುಂದುವರೆಸುತ್ತಾರೆ
  • ಬಿಜೆಪಿ ಪಕ್ಷ ಕಾಂಗ್ರೆಸ್ ಮಾಡಿರುವ ಈ ಹಿಂದಿ ಹೇರಿಕೆಯ ತಪ್ಪನ್ನು ಸರಿಪಡಿಸಬೇಕೆಂದು ಜೆಡಿಎಸ್ ಒತ್ತಾಯ
ಹಿಂದಿ ಹೇರಿಕೆಗೆ ಮುನ್ನುಡಿ ಬರೆದಿದ್ದೇ ಕಾಂಗ್ರೆಸ್: ಜೆಡಿಎಸ್  title=
ಕಾಂಗ್ರೆಸ್ ವಿರುದ್ಧ ಜೆಡಿಎಸ್ ಆಕ್ರೋಶ

ಬೆಂಗಳೂರು: ದೇಶದಲ್ಲಿ ಹಿಂದಿ ಹೇರಿಕೆಗೆ ಮುನ್ನುಡಿ ಬರೆದು ಅಡಿಪಾಯ ಹಾಕಿದ್ದೇ ಕಾಂಗ್ರೆಸ್ ಪಕ್ಷವೆಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, #stopHindiImposition ಹ್ಯಾಶ್ ಟ್ಯಾಗ್ ಬಳಸಿ ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಹಿಂದಿ ಹೇರಿಕೆಯ ವಿಚಾರದಲ್ಲಿ ಕಾಂಗ್ರೆಸ್ಸಿನ ತಪ್ಪುಗಳು ಬಿಜೆಪಿಗೆ ಸಮರ್ಥನೆಯಾಗಿದೆ, ಈ ದೇಶದಲ್ಲಿ ಹಿಂದಿ ಹೇರಿಕೆಗೆ ಮುನ್ನುಡಿ ಬರೆದು ಅಡಿಪಾಯ ಹಾಕಿದ್ದೇ ಕಾಂಗ್ರೆಸ್ ಪಕ್ಷ. ಈಗ ಬಿಜೆಪಿ ಅದನ್ನು ಇನ್ನು ಸಮರ್ಥವಾಗಿ ಮುನ್ನೆಡೆಸಿಕೊಂಡು ಬರುತ್ತಿದೆ’ ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: Siddaramaiah : ಪಂಚೆ ಕಟ್ಟಿ ಫುಟ್ಬಾಲ್ ಒದ್ದು ಗೋಲ್ ಬಾರಿಸಿದ ಮಾಜಿ ಸಿಎಂ!

‘ಇಂದು ರಾಜ್ಯದ ಕಾಂಗ್ರೆಸ್ ನಾಯಕರು ಪುಂಖಾನುಪುಂಖವಾಗಿ ಹಿಂದಿ ಹೇರಿಕೆಯ ವಿಚಾರದಲ್ಲಿ ಭಾಷಣ ಬಿಗಿಯುತ್ತಿದ್ದಾರೆ. ಆದರೆ, ಒಂದು ವೇಳೆ ಇವರು ಅಧಿಕಾರಕ್ಕೆ ಬಂದರೆ ಮತ್ತೆ ಹಿಂದಿ ಹೇರಿಕೆಯನ್ನು ಮುಂದುವರೆಸುತ್ತಾರೆ ಎನ್ನುವುದರಲ್ಲಿ ನಮಗಂತೂ ಯಾವುದೇ ಸಂಶಯವಿಲ್ಲ’ ಎಂದು ಹೇಳಿದೆ.

‘ಕಾಂಗ್ರೆಸ್ ನಾಯಕರ ಹಿಂದಿ ಹೇರಿಕೆಯ ವಿಚಾರಗಳು ಕೇವಲ ಟ್ವಿಟರ್‍ಗೆ ಸೀಮಿತವಾಗುವ ಬದಲು ಮುಂದಿನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಹಿಂದಿಗೆ ನೀಡಿರುವ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುತ್ತೇವೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿ ತಮ್ಮ ಬದ್ಧತೆಯನ್ನು ಪ್ರದರ್ಶಿಸಲಿ’ ಎಂದು ಸವಾಲು ಹಾಕಿದೆ.

ಇದನ್ನೂ ಓದಿ: "ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? "

‘ಕಾಂಗ್ರೆಸ್ ಮಾಡುವ ಯೋಜನೆಗಳನ್ನೆಲ್ಲಾ ವಿರೋಧಿಸುವ ಬಿಜೆಪಿ ಪಕ್ಷ ಕಾಂಗ್ರೆಸ್ ಮಾಡಿರುವ ಈ ಹಿಂದಿ ಹೇರಿಕೆಯ ತಪ್ಪನ್ನು ಸರಿಪಡಿಸಿ ದೇಶದ ಹಿಂದಿಯೇತರ ಭಾಷಿಕರಿಗೆ ನ್ಯಾಯ ಒದಗಿಸಿ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಿ ಭಾಷಾ ಸಮಾನತೆಯನ್ನು ಸ್ಥಾಪಿಸಲಿ’ ಎಂದು ಒತ್ತಾಯಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News