'ಬಿಗ್ ಬಾಸ್' ಶೋ ಬಂದ್ ಮಾಡಿಸಿ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್‌ ಮಿನಿಸ್ಟರ್‌ ಡಿಕೆಶಿ: ಜೆಡಿಎಸ್ ಆರೋಪ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ 'ಬಿಗ್ ಬಾಸ್' ರಿಯಾಲಿಟಿ ಶೋ ಬಂದ್ ಮಾಡಿಸಿ ಕಲಾವಿದರ ಮೇಲೆ ನಟ್ಟು ಬೋಲ್ಕು ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಸೇಡು ತೀರಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

Written by - Puttaraj K Alur | Last Updated : Oct 8, 2025, 08:38 AM IST
  • ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಬಿಡದಿಯ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ
  • ಅನಿವಾರ್ಯವಾಗಿ ಬಿಗ್‌ ಬಾಸ್‌ ಕನ್ನಡ ಸೀಸನ್ 12ರ ಶೋ ಕೂಡ ಬಂದ್‌ ಆಗಿದೆ
  • ವಿಧಿ ಇಲ್ಲದೆ ಬಿಗ್‌ ಬಾಸ್‌ ಕನ್ನಡ ಶೋದ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ
'ಬಿಗ್ ಬಾಸ್' ಶೋ ಬಂದ್ ಮಾಡಿಸಿ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್‌ ಮಿನಿಸ್ಟರ್‌ ಡಿಕೆಶಿ: ಜೆಡಿಎಸ್ ಆರೋಪ

Bigg Boss Kannada 12: ಪರಿಸರ ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿದ್ದ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದೆ. ಇದರಿಂದ ಬಿಗ್‌ ಬಾಸ್‌ ಸೀಸನ್ 12ರ ಶೋ ಕೂಡ ಬಂದ್‌ ಆಗಿದೆ. ಹೀಗಾಗಿ ವಿಧಿ ಇಲ್ಲದೆ ಬಿಗ್‌ ಬಾಸ್‌ನ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ ಬಿಗ್‌ ಬಾಸ್‌ ಮನೆಗೆ ಬೀಗ ಹಾಕಲಾಗಿದೆ. 

Add Zee News as a Preferred Source

ಬಿಗ್‌ ಬಾಸ್‌ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲ್ಲಾ ಸ್ಪರ್ಧಿಗಳನ್ನ ರಾತ್ರೋರಾತ್ರಿಯೇ ದೊಡ್ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಶೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಎಲ್ಲಾ ಸ್ಪರ್ಧಿಗಳನ್ನ ಹೊರಗೆ ಕರೆತಂದಿದ್ದಾರೆ. ಬಿಗ್‌ ಬಾಸ್‌ ಶೋ ದಿಢೀರ್‌ ಸ್ಥಗಿತವಾಗಿದ್ದರಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು ಶಿಫ್ಟ್‌ನಲ್ಲಿ ತಂತ್ರಜ್ಞರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. 

ಇದನ್ನೂ ಓದಿ: ಕಾಫಿನಾಡಿನಲ್ಲಿ ಮಿತಿ ಮೀರಿದ ಕಾಡು ಪ್ರಾಣಿಗಳ ಹಾವಳಿ

ಬಿಗ್‌ ಬಾಸ್‌ ಶೋ ಬಂದ್‌ ಆಗಿರುವ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ದ ಜೆಡಿಎಸ್‌ ಕಿಡಿಕಾರಿ ಟ್ವೀಟ್‌ ಮಾಡಿದೆ. ʼಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್‌ʼ ಎಂದು ಜೆಡಿಎಸ್‌ ಗಂಭೀರ ಆರೋಪ ಮಾಡಿದೆ. 

ಜಲ ಮಾಲಿನ್ಯ ಮತ್ತು ಅನಧಿಕೃತ ಕಾರ್ಯನಿರ್ವಹಣೆ ಆರೋಪದ ಮೇಲೆ ನಟ ಕಿಚ್ಚ ಸುದೀಪ್ ನಡೆಸಿಕೊಡುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್' ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್‌ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಜೆಡಿಎಸ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಲಾವಿದರ ಮೇಲೆ ಸೇಡು ತೀರಿಸಿಕೊಂಡಿದ್ದಾರೆʼ ಎಂದು ಆರೋಪಿಸಿದೆ.

ಇದನ್ನೂ ಓದಿ: ಡಾಲರ್‌ ಸಂಪೂರ್ಣವಾಗಿ ಸುರಕ್ಷಿತವಲ್ಲ : ಚಿನ್ನವೇ ಹೊಸ ಹಣಕಾಸು ಸುರಕ್ಷತೆಯ ಮಾನದಂಡ

ಈ ಹಿಂದೆ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವೊಂದರಲ್ಲಿ ಕಲಾವಿದರ ಕುರಿತು ಮಾತನಾಡಿ, ʼಯಾರ್ಯಾರಿಗೆ ನಟ್ಟು ಬೋಲ್ಟು ಟೈಟ್‌ ಮಾಡಬೇಕಿದೆ ಅನ್ನೋದು ನಮಗೆ ಗೊತ್ತಿದೆʼ ಅಂತಾ ಹೇಳಿದ್ದರ. ಅವರ ಈ ಹೇಳಿಕೆಯನ್ನ ಪಸ್ತಾಪಿಸಿ ಡಿಕೆಶಿ ವಿರುದ್ಧ ಜೆಡಿಎಸ್‌ ಗಂಭೀರ ಆರೋಪ ಮಾಡಿದೆ.  

 

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News