ಉಂಡ ಮನೆಯ ಗಳ ಇರಿಯುವ ಜಮೀರ್ ಅಹ್ಮದ್: ಜೆಡಿಎಸ್ ಆಕ್ರೋಶ
ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಬೆಂಗಳೂರು: ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ಎಂದು ಜೆಡಿಎಸ್ ಪ್ರಶ್ನಿಸಿದೆ. ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿದ್ದು, ‘ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಎಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ’ವೆಂದು ಟೀಕಿಸಿದೆ.
‘ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ?’ ಎಂದು ಜೆಡಿಎಸ್ ಪ್ರಶ್ನಿಸಿದೆ.
ಸಂಸದೆ ಸುಮಲತಾ ಹಾಗೂ ಆಪ್ತರ ಜೊತೆ ಗುರುತಿಸಿಕೊಳ್ಳದಂತೆ ಖಡಕ್ ವಾರ್ನಿಂಗ್ !
‘ಇಬ್ರಾಹಿಂರನ್ನು ನಾವು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಪಕ್ಷಕ್ಕೆ ಬಂದಾಗ ಪ್ರೀತಿಯಿಂದ ಬರ ಮಾಡಿಕೊಂಡಿದ್ದೇವೆ. ಈಗ ಅವರು ನಮ್ಮ ಅಧ್ಯಕ್ಷರು. ನಿಮ್ಮ ಗಂಜಿ ಕೇಂದ್ರವಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಮುಸ್ಲಿಂ ನಾಯಕ ಪಕ್ಷದ ಅಧ್ಯಕ್ಷರಾಗುವುದು ಸಾಧ್ಯವೇ? ಕಾಮಾಲೆ ಕಣ್ಣಲ್ಲಿ ಕೆಂಡ ಸುರಿದುಕೊಂಡರೆ ಯಾರಿಗೆ ನಷ್ಟ ಜಮೀರ್? ಇಬ್ರಾಹಿಂ ಅವರ ಪುತ್ರನ ಬಗ್ಗೆ ವಿಷಕಾರುವ ಕೆಟ್ಟ ಪ್ರಯತ್ನ ಮಾಡಿದ್ದೀರಿ. ಹುಮನಾಬಾದ್ ನಲ್ಲಿ ಯುವಕ ಸಿಎಂ ಫಯಾಜ್ ಗೆದ್ದೇ ಗೆಲ್ಲುತ್ತಾರೆ. ನಿಮಗೂ ಈ ವಿಷಯ ಚೆನ್ನಾಗಿ ಗೊತ್ತು. ಪಂಚರತ್ನ ರಥಯಾತ್ರೆ ಈ ಕ್ಷೇತ್ರದಲ್ಲಿ ಹೇಗೆ ಅಬ್ಬರಿಸಿತು ಎನ್ನುವ ಮಾಹಿತಿ ಪಡೆದುಕೊಳ್ಳಿ. ನಿಮ್ಮದೆ ಸಮುದಾಯದ ತರುಣನ ಮೇಲೆ ಈ ಪರಿಯ ಮತ್ಸರ ಏಕೆ ಜಮೀರ್?’ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
ಜೆಡಿಎಸ್ ಟೀಕಿಸಿದೆ.
ʼ13 ಜನರನ್ನು ಮಂಚದ ಮೇಲೆ ಮಲಗಿಸಿ ಸರ್ಕಾರ ತಂದೀರಿ..ʼ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.