ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಲೇವಡಿ ಮಾತುಗಳನ್ನಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ನೀಡಿದೆ.ತನ್ನನ್ನು ಎಕ್ಸ್ ಜಾಲತಾಣದಲ್ಲಿ ಕೆಣಕಿದ್ದ ಕಾಂಗ್ರೆಸ್ ಪಕ್ಷಕ್ಕೆ ಅದೇ ಜಾಲತಾಣದಲ್ಲಿ ಜೆಡಿಎಸ್ ಕುಟುಕಿದೆಯಲ್ಲದೆ, ಆ ಪಕ್ಷವನ್ನು ಗೆದ್ದಲು ಹಿಡಿದ ಪಕ್ಷ ಎಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

ಜೆಡಿಎಸ್-ಬಿಜೆಪಿ ಮೈತ್ರಿ ಮಾತು ಕೇಳಿ ಮತಿಗೆಟ್ಟು ಕೂತ ರಾಜ್ಯ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಸಿಂಗಲ್ ಸೀಟಿಗೂ ದಿಕ್ಕಿಲ್ಲದ ಸ್ಥಿತಿ ನೆನೆದು ಕೈಕೈ ಪರಚಿಕೊಳ್ಳುತ್ತಿದೆ. ಪಕ್ಷ ವಿಸರ್ಜನೆ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಯನ್ನೇ ತಿರುಚುತ್ತಿರುವ ಕೂಗುಮಾರಿ, ಈಗ ಮಾರಿ ಉಳಿಸಿಕೊಳ್ಳಲು ಸತ್ಯ ತಿರುಚುತ್ತಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.


75 ವರ್ಷಗಳ ಸ್ವಾತಂತ್ರ್ಯ ಭಾರತದಲ್ಲಿ ಜಾತ್ಯತೀತತೆ ಜಪ ಮಾಡಿಕೊಂಡೇ ಅಧಿಕಾರದ ಅಮಲಿನಲ್ಲಿ ತೇಲಿ 'ಜಲ್ಸಾ' ಹೊಡೆದ ಆ ಪಕ್ಷಕ್ಕೆ ತನ್ನ ಕೊಳಕು ಬೆನ್ನೇ ಕಾಣುತ್ತಿಲ್ಲ. ಶಿವಸೇನೆ, ಜೆಡಿಯು, ಡಿಎಂಕೆಯಂಥ ಪ್ರಾದೇಶಿಕ ಪಕ್ಷಗಳ 'ಬಾಲ'ದಲ್ಲಿಯೇ ಬದುಕು ಕಂಡುಕೊಂಡು ಏದುಸಿರು ಬಿಡುತ್ತಾ ದೇಶದ ಉದ್ದಗಲಕ್ಕೂ 'ಹಸ್ತವ್ಯಸ್ತ'ವಾಗಿದೆ ಎಂದು ಪಕ್ಷ ಕಿಡಿಕಾರಿದೆ.ಕಾಶ್ಮೀರದಿಂದ ಕೇರಳವರೆಗೆ, ಗುಜರಾತಿನಿಂದ ಓಡಿಶಾವರೆಗೆ ಕೈ ಪಕ್ಷ ಪಾತಾಳ ಕಚ್ಚಿರುವುದು ಆಸತ್ಯವೇ? ನಡುನೀರಿನಲ್ಲಿ ಮುಳುಗಿಹೋಗಿ, 403 ಕ್ಷೇತ್ರಗಳ ಉತ್ತರ ಪ್ರದೇಶದಲ್ಲಿ ಎರಡೇ ಕ್ಷೇತ್ರಗಳಿಗೆ ರನ್ ಔಟ್ ಆಗಿ ಮಕಾಡೆ ಮಲಗಿದ್ದೂ, ಅಲ್ಲೂ ಬಿಎಸ್ಪಿ ಬಾಲ ಹಿಡಿದು ನೇತಾಡಿದ್ದು ಇಷ್ಟು ಬೇಗ ಮರೆತೇ ಹೋಯಿತೇ? ಎಂದು ಜೆಡಿಎಸ್ ಪ್ರಶ್ನಿಸಿದೆ.


2014, 2019ರ ಲೋಕಸಭೆಯ ಚುನಾವಣೆಗಳಲ್ಲಿ ತಳಮುಟ್ಟಿದ ಪಕ್ಷಕ್ಕೆ 2024ರಲ್ಲಾದರೂ ಅವಕಾಶ ಸಿಕ್ಕೀತೇ ಎನ್ನುವ ಚಿಂತೆ. ಕಾಡಿ, ಬೇಡಿ ಕಟ್ಟಿಕೊಂಡ I.N.D.I.A ಮೈತ್ರಿಕೂಟಕ್ಕೆ ಸೇರಿಕೊಂಡ ವೀರಾಧಿವೀರರೆಲ್ಲ ಬೆಂಗಳೂರಿಗೆ ಬರುವುದಕ್ಕೆ ಮೊದಲು ಎಲ್ಲೆಲ್ಲಿದ್ದರು? ಚುನಾವಣೆ ಮುಗಿದ ಮೇಲೆ ಎಲ್ಲೆಲ್ಲಿ ಹೋಗುತ್ತಾರೆ? ಬಲ್ಲಿರಾ.. ಬಲ್ಲಿರಾ?? ಎಂದು ಜೆಡಿಎಸ್ ಕುಟುಕಿದೆ.


ಗೆದ್ದಲು ಹಿಡಿದ ಕಾಂಗ್ರೆಸ್ ಪಕ್ಷದ ಮೈತ್ರಿಕೂಟಕ್ಕೆ ಮೈಯ್ಯೆಲ್ಲಾ ರಂಧ್ರಗಳೇ ಎನ್ನುವ ಅರಿವಿಲ್ಲವೇ?  ಶಿಲಾಯುಗದ ಪಳಿಯುಳಿಕೆಯಂತೆ ಅಳಿವಿನ ಅಂಚಿನಲ್ಲಿರುವ ಕಾಂಗ್ರೆಸ್ ಪಕ್ಷ ಕಾಣದ ಕಡಲಿಗೆ ಹಂಬಲಿಸುತ್ತಿದೆ! ಕಂಡವರ ಆಸರೆಯಲ್ಲಿ ಚಳಿ ಕಾಯಿಸಿಕೊಳ್ಳಲು ಅವರಿವರಿಗೆಲ್ಲ ಕರ ಮುಗಿಯುತ್ತಿದೆ ಎಂದು ಜೆಡಿಎಸ್ ಲೇವಡಿ ಮಾಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.