ಬೆಂಗಳೂರು: ಇದೇ ತಿಂಗಳ 29 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಜೆಡಿಎಸ್‌ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ, ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ. ಕಾಂಗ್ರೆಸ್ ನಾಯಕರು ಇದನ್ನೇ ಹೇಳಿದ್ದಾರೆ. ಈ ಬಗ್ಗೆ ನನ್ನೊಂದಿಗೆ ಚರ್ಚಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಇದನ್ನೇ ಹೇಳಿದ್ದಾರೆ. ಇದರಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ ಎಂದು ಹೇಳಿದರು.


ಆಗಸ್ಟ್ ಹಾಗೂ ಸೆಪ್ಟೆಂಬರ್ ನಲ್ಲಿ ಅವಧಿ ಮುಕ್ತಾಯವಾಗಲಿರುವ 105 ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 29 ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ.


ಸ್ಥಳೀಯ ಸಂಸ್ಥೆ ಚುನಾವಣೆ ವಿವರ


  • ಆಗಸ್ಟ್‌ 10ಕ್ಕೆ ಅಧಿಸೂಚನೆ  ಪ್ರಕಟ.

  • ಆಗಸ್ಟ್‌ 17ಕ್ಕೆ  ನಾಮಪತ್ರ ಸಲ್ಲಿಕೆ ಕೊನೆದಿನ.

  • ಆಗಸ್ಟ್  29 ಕ್ಕೆ ಮತದಾನ.

  • ಸೆಪ್ಟೆಂಬರ್ 1 ಕ್ಕೆ ಮತ ಎಣಿಕೆ.