Karnataka council polls : ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಇಲ್ಲ : ಕುಮಾರಸ್ವಾಮಿ

"ನಾವು ಎರಡೂ ರಾಷ್ಟ್ರೀಯ ಪಕ್ಷಗಳಿಂದ (ಬಿಜೆಪಿ ಮತ್ತು ಕಾಂಗ್ರೆಸ್) ಸಮಾನ ಅಂತರವನ್ನು ಕಾಯ್ದುಕೊಳ್ಳುತ್ತೇವೆ". 2023ರ ವಿಧಾನಸಭೆ ಚುನಾವಣೆಗೆ ಪಕ್ಷ ಸಿದ್ಧತೆ ನಡೆಸುತ್ತಿದೆ ಎಂದರು.

Written by - Channabasava A Kashinakunti | Last Updated : Dec 8, 2021, 02:14 PM IST
  • ಬಿಜೆಪಿಯೊಂದಿಗೆ ಜೆಡಿಎಸ್ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ
  • ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
  • 2023 ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ನಾವು ಆಸಕ್ತಿ ಹೊಂದಿದ್ದೇವೆ
Karnataka council polls : ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಇಲ್ಲ : ಕುಮಾರಸ್ವಾಮಿ title=

ಬೆಂಗಳೂರು : ರಾಜ್ಯದ ಆಡಳಿತಾರೂಢ ಬಿಜೆಪಿಯೊಂದಿಗೆ ಜೆಡಿಎಸ್ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(HD Kumaraswamy),  "ನಾವು ಎರಡೂ ರಾಷ್ಟ್ರೀಯ ಪಕ್ಷಗಳಿಂದ (ಬಿಜೆಪಿ ಮತ್ತು ಕಾಂಗ್ರೆಸ್) ಸಮಾನ ಅಂತರವನ್ನು ಕಾಯ್ದುಕೊಳ್ಳುತ್ತೇವೆ". 2023ರ ವಿಧಾನಸಭೆ ಚುನಾವಣೆಗೆ ಪಕ್ಷ ಸಿದ್ಧತೆ ನಡೆಸುತ್ತಿದೆ ಎಂದರು.

ಇದನ್ನೂ ಓದಿ : Omicron In India: ಓಮಿಕ್ರಾನ್ ಅನ್ನು ಸೋಲಿಸಿದ ಬೆಂಗಳೂರಿನ ವೈದ್ಯನಿಗೆ ಮತ್ತೆ ಕೊರೊನಾ ಸೊಂಕು

ಜೆಡಿಎಸ್ ಸ್ಪರ್ಧಿಸದ 19 ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನುಕೂಲವಾಗಿರುವುದರಿಂದ (Karnataka council polls) ಸ್ಥಳೀಯ ಮುಖಂಡರಿಗೆ ಕರೆ ನೀಡುವಂತೆ ಹೇಳಿದ್ದೇವೆ ಎಂದು ಅವರು ಹೇಳಿದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹಲವು ಬಾರಿ ಪ್ರಾದೇಶಿಕ ಪಕ್ಷದ ಬೆಂಬಲ ಕೋರಿದ್ದರು. ಯಡಿಯೂರಪ್ಪ ಅವರು ಮಾಡಿರುವ ಮನವಿ ಗೊಂದಲ ಸೃಷ್ಟಿಸಿದ್ದು, ಬಿಜೆಪಿ ಜತೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ(BJP) ಎರಡನ್ನೂ "ರಾಜಕೀಯ ಶತ್ರುಗಳು" ಎಂದು ಬಣ್ಣಿಸಿದರು. "ನಾವು ಆರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದೇವೆ ಮತ್ತು ನಾವು ಎಲ್ಲ ಸ್ಥಾನಗಳನ್ನೂ ಗೆಲ್ಲುತ್ತೇವೆ, 2023 ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ನಾವು ಆಸಕ್ತಿ ಹೊಂದಿದ್ದೇವೆ" ಎಂದು ಅವರು ಪುನರುಚ್ಚರಿಸಿದರು.

ಬಿಜೆಪಿಯ ಬಿ ಟೀಮ್ ಎಂದು ಕಾಂಗ್ರೆಸ್ ಜೆಡಿಎಸ್(Congress, JDS) ವಿರುದ್ಧ ವಾಗ್ದಾಳಿ ನಡೆಸಿತ್ತು. ಬಿಜೆಪಿಗೆ ಸಹಾಯ ಮಾಡಲು ಇತ್ತೀಚೆಗೆ ನಡೆದ ಹಂಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ : ಜನರಿಗೆ ದ್ರೋಹ ಮಾಡುವುದಕ್ಕೆ ಕಾಂಗ್ರೆಸ್ ಹೆಸರುವಾಸಿ: ಸಿಎಂ ಬೊಮ್ಮಾಯಿ

ಕರ್ನಾಟಕ ವಿಧಾನಸಭೆಯ ಮೇಲ್ಮನೆಯಲ್ಲಿ ಬಹುಮತ ಗಳಿಸಲು ತನ್ನೆಲ್ಲ ಪ್ರಯತ್ನ ನಡೆಸುತ್ತಿರುವ ಆಡಳಿತಾರೂಢ ಬಿಜೆಪಿಗೆ ಜೆಡಿಎಸ್‌ನ ಈ ನಿರ್ಧಾರ ಹಿನ್ನಡೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಫಲಿತಾಂಶ ನಿರ್ಣಾಯಕ. ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಡಿಸೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News