ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆ ಮುಂದೂಡಲು ಜೆಡಿಎಸ್ ಒತ್ತಾಯ
ಅಕ್ರಮವಾಗಿ ಸಂಗ್ರಹಿಸಲಾಗಿದ್ದು ಸಾವಿರಾರು ಮತದಾರರ ಗುರುತಿನ ಪತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ಆ ಕ್ಷೇತ್ರದ ಮತದಾನವನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್ಮೆಂಟ್'ನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದು ಸಾವಿರಾರು ಮತದಾರರ ಗುರುತಿನ ಪತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ಆ ಕ್ಷೇತ್ರದ ಮತದಾನವನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ರಾಜರಾಜೇಶ್ವರಿ ನಗರದ ಶಾಸಕರು ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ, ಅವರ ಬಳಿ 30 ಸಾವಿರಕ್ಕೂ ಹೆಚ್ಚು ಅಸಲಿ ಮತ್ತು ನಕಲಿ ವೋಟರ್ ಕಾರ್ಡ್ಗಳು ಇರುವ ಬಗ್ಗೆ ತಮಗೆ ಮಾಹಿತಿ ಇದೆ ಎಂದು ಆರೋಪಿಸಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಮತ್ತು ಚುನಾವಣೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಪತ್ರ ಬರೆದಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ಒಂದರಲ್ಲಿ ಮಂಗಳವಾರ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 9,746 ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದು, ಚುನಾವಣಾ ಅಧಿಕಾರಿಗಳು ಅದನ್ನು ವಶಪಡಿಸಿಕೊಂಡಿದ್ದರು. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳೂ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಜೆಡಿಎಸ್ ಚುನಾವಣೆ ಮುಂದೂಡಿಕೆಗೆ ಆಗ್ರಹಿಸಿದೆ.