ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ನೆಲಮಂಗಲ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ವಿಕಲಚೇತನರ ಸಮಸ್ಯೆ ಹಾಗೂ ಅಗತ್ಯಗಳನ್ನು ಅರಿತು, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಬೇಕಾಗಿದೆ.


ಇದನ್ನೂ ಓದಿ: ಸಾನಿಯಾ ಮಿರ್ಜಾ ಅಭಿಮಾನಿಗಳಿಗೆ ಶಾಕ್! ನಿವೃತ್ತಿಯ ನಿರ್ಧಾರ ಪ್ರಕಟಿಸಿದ ಟೆನಿಸ್ ತಾರೆ


ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ, ನೆಲಮಂಗಲ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿ ಹಾಗೂ ಹೊಸಕೋಟೆ ತಾಲ್ಲೂಕಿನ ದೇವನಗೊಂದಿ, ಕಂಬಳೀಪುರ, ಓರೋಹಳ್ಳಿ, ಲಕ್ಕೊಂಡಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ನಡೆಯಲಿದ್ದು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಲು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆಸಕ್ತ ವಿಕಲಚೇತನರು 2022ರ ಫೆಬ್ರವರಿ 02 ರೊಳಗೆ ಅರ್ಜಿ ಸಲ್ಲಿಸುವುದು.


ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!


ಗೌರವಧನ ಹುದ್ದೆಗೆ ಇರಬೇಕಾದ ಅರ್ಹತೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ: 03, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.