close

News WrapGet Handpicked Stories from our editors directly to your mailbox

Job Alert! ಫೆಬ್ರವರಿ 24, 25 ರಂದು ನಡೆಯಲಿದೆ ಉದ್ಯೋಗ ಮೇಳ

ಫೆಬ್ರವರಿ 24ರಂದು ಬೆಳಿಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Updated: Feb 21, 2019 , 07:20 PM IST
Job Alert! ಫೆಬ್ರವರಿ 24, 25 ರಂದು ನಡೆಯಲಿದೆ ಉದ್ಯೋಗ ಮೇಳ

ಮೈಸೂರು: ಇದೇ ಫೆಬ್ರವರಿ 24 ಮತ್ತು 25 ರಂದು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. 

ಕರ್ನಾಟಕ ಸರ್ಕಾರದ ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕಾರ್ಮಿಕ ಇಲಾಖೆ, ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾಡಳಿತ ಇವರ  ಸಂಯುಕ್ತಾಶ್ರಯದಲ್ಲಿ ಮೈಸೂರು ಜಿಲ್ಲಾಡಳಿತ ಹಾಗೂ ಚಾಮರಾಜನಗರ ಜಿಲ್ಲಾಡಳಿತ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಫೆಬ್ರವರಿ 24ರಂದು ಬೆಳಿಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಉದ್ಯೋಗ ಮೇಳದಲ್ಲಿ ಒಟ್ಟು 4858 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಮಾಡಿಕೊಳ್ಳಲಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು www.mysuruchnagarjobfair.com ವೆಬ್‍ಸೈಟ್‍ನಲ್ಲಿ ಆಧಾರ್‍ಕಾರ್ಡ್‍ನೊಂದಿಗೆ ತಮ್ಮ ಸ್ವವಿವರ ನಮೂದಿಸಬೇಕು. ಬಳಿಕ ಅಭ್ಯರ್ಥಿಗಳ ಶೈಕಣಿಕ ಅರ್ಹತೆ ಮೇಲೆ ಯುನಿಕ್ ಕೋಡ್ ನೀಡಲಾಗುವುದು. ಆಯ್ಕೆಯಾದ ಉದ್ಯೋಗಾಕಾಂಕ್ಷಿಗಳಿಗೆ ಮೇಳದಲ್ಲಿಯೇ ನೇಮಕಾತಿ ಆದೇಶ ನೀನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.