ಧಾರವಾಡ : ಬಾಲಕಾರ್ಮಿಕ ಯೋಜನಾ ಸೊಸಾಯಿಟಿಯ ಯೋಜನಾ ನಿರ್ದೇಶಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಮಾಜ ಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ, ಎಂ.ಎಸ್.ಡಬ್ಲ್ಯೂ, ಅಭಿವೃದ್ಧಿ ಅಧ್ಯಯನ, ಲಾಭರಹಿತ ಸಂಸ್ಥೆಗಳ (ಎನ್ ಜಿಓ) ಹಾಗೂ ನಿರ್ವಹಣಾ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.


ಇದನ್ನೂ ಓದಿ: Laxman Savadi: ಸಾರಿಗೆ ನೌಕರರಿಗೆ ಸಿಹಿ ಸುದ್ದಿ: 'ಸದ್ಯದಲ್ಲೇ 6ನೇ ವೇತನ ಆಯೋಗ ಜಾರಿಗೆ'


ವಿವಿಧ ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿದ ಕುರಿತು 5 ವರ್ಷಗಳ ಅನುಭವ ಹೊಂದಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಕನ್ನಡ ಮತ್ತು ಇಂಗ್ಲಿಷ್ ಮಾತನಾಡುವ ಹಾಗೂ ಬರೆಯುವ ಕೌಶಲ್ಯ ಹೊಂದಿರಬೇಕು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕಚೇರಿ ಲೆಕ್ಕಪತ್ರಗಳ ವ್ಯವಹಾರ ಅರಿತಿರಬೇಕು ಹಾಗೂ  ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ, ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಯಾಗಿರಬಾರದು ಹಾಗೂ 40 ವರ್ಷ ವಯೋಮಿತಿಯೊಳಗಿರಬೇಕು.


ಇದನ್ನೂ ಓದಿ: ಹೆಚ್ಚುತ್ತಿರುವ ಕರೋನಾ ವೈರಸ್ ಪ್ರಕರಣ : ಹೊರಗುತ್ತಿಗೆ ವೈದ್ಯರು ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ


ಅರ್ಜಿಗಳು ಯೋಜನಾ ನಿರ್ದೇಶಕರು, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿಗಳ ಕಾರ್ಯಾಲಯ ದಲ್ಲಿ ಲಭ್ಯವಿದ್ದು, ಏಪ್ರಿಲ್ 20 ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು  ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ, ಧಾರವಾಡ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.