ಬೆಂಗಳೂರು : ಅರಮನೆ ಮೈದಾನದಲ್ಲಿ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದ್ದರು. ಅದರಂತೆ ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ ಎದ್ನು ಆರೋಪಿಸಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40 ಶೇ ಏರಿಕೆಯಾಗಿದೆ ಎಂದು ಅಂಕಿ ಅಂಶಗಳ ಸಮೇತ ಸಿದ್ದರಾಮಯ್ಯ ವಿವರಿಸಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯವರೇ ನಿಮಗೆ ಮಾನ ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ವಾ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನಾವು ಯುವ ನಿಧಿಯನ್ನೂ ಕೊಡುತ್ತೇವೆ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಸುಮಲತಾ ಅಂಬರೀಶ್: ಈ ಬಾರಿ ಇಂಡಿಪೆಂಡೆಂಟ್ ಸ್ಪರ್ಧೆ ಇಲ್ಲ ಎಂದ ಸಂಸದೆ
ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.