JOB News: ಹಿರಿಯ ಅಪರ ಜಿಲ್ಲಾ ಸರ್ಕಾರಿ, ತಾಲೂಕು ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲೆಯ ಹಿರಿಯ ಅಪರ ಜಿಲ್ಲಾ ಸರ್ಕಾರಿ ವಕೀಲರು,ತಾಲೂಕು ಅಪರ ಸರ್ಕಾರಿ ವಕೀಲರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂಗಳೂರು: ಕೊಪ್ಪಳ ಜಿಲ್ಲೆಯ ಹಿರಿಯ ಅಪರ ಜಿಲ್ಲಾ ಸರ್ಕಾರಿ ವಕೀಲರು,ತಾಲೂಕು ಅಪರ ಸರ್ಕಾರಿ ವಕೀಲರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ :ಸೋನಿಯಾ ಗಾಂಧಿ ಭೇಟಿ ಅಂತ್ಯ: ರಾಷ್ಟ್ರ ರಾಜಕೀಯಕ್ಕೆ ಹೋಗಲ್ಲವೆಂದ ಸಿದ್ದರಾಮಯ್ಯ
ಕೊಪ್ಪಳ ಜಿಲ್ಲೆಯ ಹಿರಿಯ ಅಪರ ಜಿಲ್ಲಾ ಸರ್ಕಾರಿ ವಕೀಲರು, ಯಲಬುರ್ಗಾ ಹಾಗೂ ಗಂಗಾವತಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗಳ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5 ಮತ್ತು 26(2) ಹಾಗೂ 12(ಎ)(ಬಿ) ಮತ್ತು (ಸಿ) ರನ್ವಯ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಸಾಕಪ್ಪ ಸಾಕು ಬೆಂಗಳೂರು.! ಲಾಕ್ ಡೌನ್ ಗೆ ಹೆದರಿ ಊರಿಗೆ ದೌಡಾಯಿಸುತ್ತಿರುವ ಜನ
ಏಳು ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ವೈಯಕ್ತಿಕ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು ದ್ವಿಪ್ರತಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಈ ಅರ್ಜಿಯನ್ನು ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದ್ದು, ಅಂದು ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.