ಬೆಂಗಳೂರು: ಹೊಸಪೇಟೆಯ  ಸ್ವತಂತ್ರ  ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇದರ ಅಂಗವಾಗಿ ಏ.19 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: ‘ಪ್ರಧಾನ್‌ಮಂತ್ರಿ ಸಂಗ್ರಹಾಲಯ‘ ಉದ್ಘಾಟಿಸಿದ ಪ್ರಧಾನಿ ಮೋದಿ


20 ರಿಂದ 28 ವರ್ಷದೊಳಗಿನ ಪಿಯುಸಿ, ಐಟಿಐ, ಯಾವುದೇ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಪುರುಷರು ಅಭ್ಯರ್ಥಿಗಳು  ಮಾತ್ರ  ಸಂದರ್ಶನಕ್ಕೆ ಹಾಜರಾಗಬಹುದಾಗಿದ್ದು, ದ್ವಿ-ಚಕ್ರ ವಾಹನ ಲೈಸೆನ್ಸ್ ಮತ್ತು ಪ್ಯಾನ್‌ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು.


ಇದನ್ನು ಓದಿ: ಕೆಜಿಎಫ್ 2 ಅಧೀರಾಗೆ ಸೇರಿದ್ದು ಎಂದ ಸಂಜಯ್ ದತ್ ಪತ್ನಿ..!


ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ಆಧಾರ್ ಕಾರ್ಡ್ನ ಪ್ರತಿ, ಬಯೋಡೇಟಾ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 7208063971, 9321943757 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.