ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಸೌಹಾರ್ಧ ಗ್ರಾಮೀಣಾಭಿವೃದ್ಧಿ ಅಕಾಡೆಮಿ ಹಾಗೂ ಮಾತೃಭೂಮಿ ಸಂಸ್ಥೆ ಬೀದರ ಇವುಗಳ ಸಹಯೋಗದೊಂದಿಗೆ ಕನ್ನಡ ಸ್ವಯಂ ಶಿಕ್ಷಕ ಯೋಜನೆಯಡಿ ಬೀದರ ಜಿಲ್ಲೆಯ ಗಡಿಭಾಗದ 50 ಹಳ್ಳಿಗಳಲ್ಲಿ 9 ತಿಂಗಳುಗಳ ಕಾಲ ಕನ್ನಡ ಕಲಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Ind Vs SA: ದ. ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಶತಕ ಗಳಿಸಿದ್ದು ಹೇಗೆ? ರಹಸ್ಯ ಬಿಚ್ಚಿಟ್ಟ ಕೆಎಲ್ ರಾಹುಲ್  


ಈ ಯೋಜನೆಯಡಿ ಸ್ವಯಂ ಶಿಕ್ಷಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ತಿಳಿಸಿದ್ದಾರೆ.ಆಸಕ್ತಿಯುಳ್ಳ ಅಭ್ಯರ್ಥಿಗಳ ವಯೋಮಿತಿ 20 ರಿಂದ 40 ವರ್ಷದೊಳಗಿರಬೇಕು. ಬೀದರ ಜಿಲ್ಲೆಯಲ್ಲಿ ಕನ್ನಡ ಕಲಿಸಲು ಆಯ್ದುಕೊಂಡಿರುವ ಗ್ರಾಮದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಓಮಿಕ್ರಾನ್ ಭೀತಿ: ಹೊಸ ನಿರ್ಬಂಧಗಳನ್ನು ಘೋಷಿಸಿದ ತಮಿಳುನಾಡು


ಅರ್ಜಿ ಸಲ್ಲಿಸಲು 2022ರ ಜನವರಿ 7 ಕೊನೆಯ ದಿನವಾಗಿದೆ. 2022ರ ಜನವರಿ 15 ರಂದು ಸಂದರ್ಶನ ಜರುಗಲಿದೆ.ಆಸಕ್ತಿಯುಳ್ಳ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ https://sahithyaacademy.karnataka.gov.in  ವೆಬ್‍ಸೈಟ್‍ದಿಂದ ನಿಗದಿತ ಅರ್ಜಿ ನಮೂನೆ ಹಾಗೂ ಕನ್ನಡ ಕಲಿಸುವ ಗ್ರಾಮಗಳು ಸೇರಿದಂತೆ ಮತ್ತಿತರ ವಿವರವನ್ನು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.