JOBS: ಗುತ್ತಿಗೆ ಆಧಾರದಲ್ಲಿ ವಕೀಲರ ನೇಮಕಕ್ಕಾಗಿ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿರುವ ಕುಷ್ಟಗಿ ಹಾಗೂ ಕೊಪ್ಪಳ ಅಪರ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ 02 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದ್ದು, ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಿದೆ.
ಕೊಪ್ಪಳ: ಜಿಲ್ಲೆಯಲ್ಲಿರುವ ಕುಷ್ಟಗಿ ಹಾಗೂ ಕೊಪ್ಪಳ ಅಪರ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ 02 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದ್ದು, ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಿದೆ.
ಕಾನೂನು (Law) ಪದವೀಧರರಾಗಿ ಯಾವುದೇ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕಕ್ಕೆ 03 ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಾವು ವಕೀಲ ವೃತ್ತಿ ನಡೆಸುತ್ತಿರುವ ಬಗ್ಗೆ ಆಯಾ ನ್ಯಾಯಾಲಯದ ಪೀಠಾಧಿಕಾರಿಗಳಿಂದ ಪಡೆದ ಪ್ರಮಾಣಪತ್ರವನ್ನು ಅರ್ಜಿಯೊಡನೆ ಕಡ್ಡಾಯವಾಗಿ ಲಗತ್ತಿಸಬೇಕು.
ಇದನ್ನೂ ಓದಿ: Hero Honda CD 100! ಹೊಸ ಅವತಾರದಲ್ಲಿ ಮತ್ತೆ ರಸ್ತೆಗಿಳಿದ ಹಿರೋ ಹೋಂಡಾ ಸಿಡಿ 100!
ಆಯ್ಕೆಗೊಂಡ ಅಭ್ಯರ್ಥಿಗಳು ತಾವು ಪ್ರಸ್ತುತ ವಕೀಲ ವೃತ್ತಿಯನ್ನು ನಡೆಸುತ್ತಿರುವ ಸ್ಥಳವನ್ನು ಹೊರತುಪಡಿಸಿ ಕೊಪ್ಪಳ ಜಿಲ್ಲೆಯಲ್ಲಿನ ಬೇರೆ ನ್ಯಾಯಾಲಯಗಳಲ್ಲಿ ನೆರೆಯ ಜಿಲ್ಲೆಯ ನ್ಯಾಯಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಮಾರ್ಚ್ 07 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಅರ್ಜಿಯೊಂದಿಗೆ ಪ್ರತಿ ವರ್ಷದ ಕಾನೂನು ಪದವಿಯ ಅಂಕಪಟ್ಟಿಗಳು, ಭಾರತ ದೇಶದ ಮಾನ್ಯತೆ ಪಡೆದ ಯಾವುದೇ ವಕೀಲ ವೃತ್ತಿ ನಡೆಸುವ ಬಗ್ಗೆ ಪಡೆದ ಸನ್ನದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿಗಳು, ಜಾತಿ ಮತ್ತು ಆದಾಯದ ಅನ್ವಯ ಮೀಸಲಾತಿ ಸೌಲಭ್ಯವನ್ನು ಪಡೆಯಲಿಚ್ಛಿಸುವವರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದೆ: ಕಾಂಗ್ರೆಸ್
ಗುತ್ತಿಗೆ ಆಧಾರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕಾಲ ಕಾಲಕ್ಕೆ ಸರ್ಕಾರದ/ಅಭಿಯೋಗದ ನಿರ್ದೇಶಕರು ನೀಡುವ ನಿರ್ದೇಶನ, ಸೂಚನೆಗಳನ್ನು ಪಾಲಿಸತಕ್ಕದ್ದು. ಅಭ್ಯರ್ಥಿಯು ಆದೇಶದಲ್ಲಿನ ಯಾವುದೇ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ಸರ್ಕಾರಕ್ಕೆ ಕಂಡುಬಂದಲ್ಲಿ ಅಂತಹ ಅಭ್ಯರ್ಥಿಯನ್ನು ಯಾವುದೇ ಪೂರ್ವ ಸೂಚನೆ ಇಲ್ಲದೆ ಹುದ್ದೆಯಿಂದ ತೆಗೆದು ಹಾಕಲಾಗುವುದು.
ಗುತ್ತಿಗೆ ಆಧಾರದಲ್ಲಿನ ಸೇವೆಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಯಾವುದೇ ಸಂದರ್ಭದಲ್ಲೂ ಖಾಯಂಗೊಳಿಸಲು ಅವಕಾಶವಿರುವುದಿಲ್ಲ ಎಂದು ಕೊಪ್ಪಳ (koppal) ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ಪ್ರಧಾನ ಸರ್ಕಾರಿ ಅಭಿಯೋಜಕರಾದ ಬಂಡಿ ಅಪರ್ಣಾ ಮನೋಹರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.