ಧಾರವಾಡ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದೆ.ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತ ಅಥವಾ ವಿಶ್ವವಿದ್ಯಾನಿಲಯದವರು ನಡೆಸಿದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ 40 ವರ್ಷದೊಳಗಿನ ಕ್ರೀಡಾಪಟುಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: Sourav Ganguly: ಬಿಸಿಸಿಐ ಮುಖ್ಯಸ್ಥ ಗಂಗೂಲಿ ಕುರ್ಚಿಯೂ ಹೋಗುತ್ತಾ? ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಸ್ಪರ್ಧಿಗಳು!


ಕ್ರೀಡಾಪಟುಗಳು ತಮ್ಮ ವೈಯಕ್ತಿಕ ವಿವರ ಮತ್ತು ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಒಂದು ಸಾವಿರ ರೂ.ಗಳ ಡಿಡಿಯನ್ನು ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಇವರ ಹೆಸರಿಗೆ ತೆಗೆದು ಅರ್ಜಿಯೊಂದಿಗೆ ಲಗತ್ತಿಸಿ ಮಾರ್ಚ್ 2 ರೊಳಗಾಗಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರ್.ಎನ್.ಶೆಟ್ಟಿ ಕ್ರೀಡಾಂಗಣ, ಧಾರವಾಡ. ದೂರವಾಣಿ ಸಂಖ್ಯೆ: 0836-2447424 ಸಂಪರ್ಕಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: 'ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದಾಗಿ ಪ್ರತಿ ಟೆಸ್ಟ್ ಸರಣಿಯು ಅತ್ಯಂತ ಮಹತ್ವದ್ದಾಗಿದೆ'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.