"ಪತ್ರಕರ್ತರು ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು"

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Written by - Zee Kannada News Desk | Last Updated : Feb 3, 2024, 05:19 PM IST
  • ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು.
  • ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ.
  • ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದು ಅಭಿಪ್ರಾಯಪಟ್ಟರು.
"ಪತ್ರಕರ್ತರು ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು" title=

ದಾವಣಗೆರೆ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು..

ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು.ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಬೇಕು ಎಂದು ತಿಳಿಹೇಳಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೂ Voter ID Card Correction  ಮಾಡಿಸಬೇಕೆ ? ಇಲ್ಲಿದೆ  ಆನ್‌ಲೈನ್ ಪ್ರಕ್ರಿಯೆಯ ಹಂತ ಹಂತದ ವಿವರ 

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ, ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು.ಸ್ವಾತಂತ್ರ್ಯಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದು ಹೇಳಿದರು.

ಜನ ಸಾಮಾನ್ಯರು ಪತ್ರಿಕಾವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ: Wi-Fi Router: ರಾತ್ರಿ ಮಲಗುವ ಮುನ್ನ Wi-Fi ರೂಟರ್ ಆಫ್ ಮಾಡಲ್ವಾ? ಇದೆಷ್ಟು ಡೇಂಜರಸ್ ಗೊತ್ತಾ?

ಪತ್ರಿಕಾವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು.ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಭರವಸೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News