ಬೆಂಗಳೂರು: ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು


COMMERCIAL BREAK
SCROLL TO CONTINUE READING

ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ "ವರ್ಷದ ವ್ಯಕ್ತಿ - ವಿಶೇಷ ವ್ಯಕ್ತಿ" ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. 


ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ.ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.


ಇದನ್ನೂ ಓದಿ: ರಾಜಧಾನಿಯಲ್ಲಿ ನ್ಯೂ ಇಯರ್‌ ಸಂಭ್ರಮ : ಅಹಿತಕರ ಘಟನೆ ನಡೆಯದಂತೆ ಬೆಸ್ಕಾಂ ಅಲರ್ಟ್‌


ಸ್ವಾತಂತ್ರ್ಯಪೂರ್ವದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು ಎಂದು ಹೇಳಿದರು.


ನನ್ನನ್ನು ಜೆಡಿಎಸ್ ನಿಂದ ಉಚ್ಛಾಟಣೆ ಮಾಡಿದರೇ ಹೊರತು ನಾನು ಜೆಡಿಎಸ್ ಬಿಡಲಿಲ್ಲ. ಹೀಗಾಗಿ ವರದಿ, ವಿಶ್ಲೇಷಣೆ ಮಾಡುವಾಗ ನಾನು ಜೆಡಿಎಸ್ ಪಕ್ಷ ತೊರೆದೆ ಎಂದು ಬರೆಯುವುದು ಸರಿಯಲ್ಲ ಎಂದು ಹೇಳಿದರು.


ಇದನ್ನೂ ಓದಿ: ಬೇಲೂರು ಶ್ರೀವೀರಾಂಜನೇಯ ಸ್ವಾಮಿ ಶೋಭಾಯಾತ್ರೆ


ವರ್ಷದ ವ್ಯಕ್ತಿ ಪ್ರಶಸ್ತಿ ಪಡೆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿಶೇಷ ಪ್ರಶಸ್ತಿ ಪುರಸ್ಕೃತರಾದ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ಅಭಿನಂದನೆಗಳು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.