ಚಾಮರಾಜನಗರ: ಚುನಾವಣೆ ಸಮೀಪದಲ್ಲಿ ಬಿಜೆಪಿ ಆರಂಭಿಸಿರುವ ಬಿಜೆಪಿ ಸಂಕಲ್ಪ ಯಾತ್ರೆಗೆ ಇಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಿದರು.
ಇದನ್ನೂ ಓದಿ: Gas prices hike: ಅಚ್ಛೆ ದಿನಗಳಲ್ಲಿ ಅನ್ನ ಬೇಯಿಸಿ ತಿನ್ನುವುದೂ "ಐಷಾರಾಮಿ ಜೀವನ"- ಕಾಂಗ್ರೆಸ್ ಟೀಕೆ
ಹೆಲಿಕಾಪ್ಟರ್ ಮೂಲಕ ಮಾದಪ್ಪನ ಬೆಟ್ಟಕ್ಕೆ ಬಂದಿಳಿದ ಜೆ.ಪಿ.ನಡ್ಡಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಾಥ್ ನೀಡಿದರು.
ಸಚಿವ ಸೋಮಣ್ಣ ಗೈರು:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಂದರೂ, ಈಶ್ವರಪ್ಪ ತಂಡದಲ್ಲಿದ್ದರೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಗೈರಾಗಿದ್ದು ಬಿಜೆಪಿಯಲ್ಲಿನ ಭಿನ್ನಮತ ಅಸಮಾಧಾನಕ್ಕೆ ಕನ್ನಡಿ ಹಿಡಿದಂತಾಗಿದೆ. ಬೊಮ್ಮಾಯಿ ಅವರು ಅನುದಾನ ಕೊಟ್ಟಿಲ್ಲ. ಜೊತೆಗೆ ಬೇರೆ ಬೇರೆ ಕಾರಣಗಳಿಂದ ಪಕ್ಷದ ವಿರುದ್ಧ ಸೋಮಣ್ಣ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಇಂದಿನಿಂದ ಬಿಜೆಪಿ ರಥಯಾತ್ರೆ- ಮಲೆ ಮಹದೇಶ್ವರ ಬೆಟ್ಟದಿಂದ ಜೆಪಿ ನಡ್ಡಾ ಚಾಲನೆ
ವಿಶೇಷ ಪೂಜೆ:
ಜೆ.ಪಿ.ನಡ್ಡಾ ಅವರು ಮಲೆಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ನಗಾರಿ ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ಕೊಟ್ಟರು. ಯಾತ್ರೆಗೆ ಚಾಲನೆ ಸಿಕ್ಕ ಬಳಿಕ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, ಇಂದಿನ ರಥಯಾತ್ರೆ ದಿಗ್ವಿಜಯದ ಯಾತ್ರೆ ಎಂದು ಬಣ್ಣಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.