ಮಂಡ್ಯ : ವಿಶ್ವ ಹಿಂದೂ ಪರಿಷತ್ ಸಂಘಟನೆಯಿಂದ ಶ್ರೀರಂಗಪಟ್ಟಣ ಚಲೋ ಹಿನ್ನಲೆ ಜೂನ್ 4, 5 ರಂದು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಶ್ವೇತಾ ರವಿಂದ್ರ ಅವರು ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ್ದಾರೆ. 


ಇದನ್ನೂ ಓದಿ : ನನಗಷ್ಟೇ ಅಲ್ಲ ಪ್ರತಿಯೊಬ್ಬ ಭಾರತೀಯನಿಗೂ RSS ಕಂಡರೆ ಭಯವಿದೆ: ಸಿದ್ದರಾಮಯ್ಯ


ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಮುಂದಾಗಿವೆ. ಹೀಗಾಗಿ ಪಟ್ಟಣದಲ್ಲಿ ಜೂನ್ 3 ರ ಸಂಜೆ 6 ಗಂಟೆಯಿಂದ ಜೂನ್ 5 ರ ಬೆಳಿಗ್ಗೆ 6 ಗಂಟೆವೆರೆಗೆ 144 ಸೆಕ್ಷನ್ ಜಾರಿಯಲಿರಲಿದೆ. ವಿಶ್ವ ಹಿಂದೂ ಪರಿಷತ್ ಸಂಘಟನೆಯ ಮೆರವಣಿಗೆ ಜಾಥಾ, ರಥಯಾತ್ರೆ, ಪ್ರತಿಭಟನೆಗೆ ಪಟ್ಟಣದ ವ್ಯಾಪ್ತಿಯಲ್ಲಿ ನಿರ್ಬಂಧ ಹೇರಲಾಗಿದೆ. 


ವಿಶ್ವ ಹಿಂದೂ ಪರಿಷತ್ ಸಂಘಟನೆ ಮಂಡ್ಯ ಜಿಲ್ಲಾಧಿಕಾರಿಗೆ, ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಈ ದೇವಸ್ಥಾನದ ಮೇಲೆ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ. ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಮನವಿ ಸಲ್ಲಿಸಿತ್ತು.


ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲು‌ ಆದೇಶ ಹೊರಡಿಸಲಾಗಿದೆ. ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಇರಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. 


ಇದನ್ನೂ ಓದಿ : ಸಚಿವ ಬಿ.ಸಿ.ನಾಗೇಶ್ ಮನೆಮೇಲೆ ದಾಳಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ