ಆನೆಯಿಂದ ಬಚಾವ್ ಆದ್ರೂ ಬಂಡೀಪುರ ಅರಣ್ಯಾಧಿಕಾರಿಗಳ ‘ದಂಡ’ದ ಬಲೆಗೆ ಬಿದ್ದ ಇಬ್ಬರು!!
Elephant Attack Viral Video: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೂಲೆಹೊಳೆ ವಲಯದಲ್ಲಿ ಮೂತ್ರ ವಿಸರ್ಜನೆಗೆಂದು ಕಾರಿನಿಂದ ಇಳಿದಿದ್ದ ಇಬ್ಬರನ್ನು ಹೆಣ್ಣು ಕಾಡಾನೆಯೊಂದು ಏಕಾಏಕಿ ಅಟ್ಟಾಡಿಸಿಕೊಂಡು ಬಂದಿದೆ.
Elephant Attack Viral Video: ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ನಿಯಮ ಉಲ್ಲಂಘಿಸಿದ್ದಲ್ಲದೆ, ಆನೆ ದಾಳಿಗೆ ಒಳಗಾಗಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ವಿಚಾರಣೆ ನಡೆಸಿ 25 ಸಾವಿರ ದಂಡ ವಿಧಿಸಿದೆ.
ಇದನ್ನೂ ಓದಿ: Akaay Zodiac Sign: ಅಪರೂಪದ ಜಾತಕದಲ್ಲಿ ವಿರಾಟ್ ಪುತ್ರನ ಜನನ: ಹೇಗಿದೆ ಗೊತ್ತಾ ‘ಅಕಾಯ್’ ಭವಿಷ್ಯ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೂಲೆಹೊಳೆ ವಲಯದಲ್ಲಿ ಮೂತ್ರ ವಿಸರ್ಜನೆಗೆಂದು ಕಾರಿನಿಂದ ಇಳಿದಿದ್ದ ಇಬ್ಬರನ್ನು ಹೆಣ್ಣು ಕಾಡಾನೆಯೊಂದು ಏಕಾಏಕಿ ಅಟ್ಟಾಡಿಸಿಕೊಂಡು ಬಂದಿದೆ. ಓಡುವ ರಭಸದಲ್ಲಿ ಓರ್ವ ನೆಲಕ್ಕೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಆನೆ ಆತನಿಗೆ ಕಾಲಿನಲ್ಲು ತುಳಿಯಲು ಯತ್ನಿಸಿದೆ. ಅದೃಷ್ಟವಶಾತ್ ಅದರ ಕಾಲು ಆ ವ್ಯಕ್ತಿಯ ದೇಹಕ್ಕೆ ತಾಗಿಲ್ಲ.
ಹೆದ್ದಾರಿಯಲ್ಲಿ ಸಂಚರಿಸುವಾಗ ಆನೆ ಸೇರಿದಂತೆ ಇತರ ಪ್ರಾಣಿಗಳು ರಸ್ತೆ ಬದಿಯಲ್ಲಿ ಕಾಣಸಿಗುತ್ತವೆ. ವಾಹನಗಳನ್ನು ನಿಲ್ಲಿಸಬಾರದು ಎಂಬ ಸೂಚನೆ ಇದ್ದರೂ, ನಿಯಮ ಮೀರಿ ವಾಹನಗಳ ನಿಲ್ಲಿಸಿ ಪ್ರಾಣಿಗಳ ಪೋಟೋ ತೆಗೆಯಲು ಮುಂದಾಗುತ್ತಾರೆ. ಈ ಹಿಂದೆಯೂ ಈ ಹೆದ್ದಾರಿಯಲ್ಲಿ ಇಂತಹ ಪ್ರಕರಣಗಳು ನಡೆದಿವೆ.
ಇದನ್ನೂ ಓದಿ: ಟಿ20 ಕ್ರಿಕೆಟ್’ನಲ್ಲಿ ಇತಿಹಾಸ ನಿರ್ಮಿಸಿದ ಬಾಬರ್ ಅಜಂ: ವಿರಾಟ್, ಗೇಲ್ ವಿಶ್ವದಾಖಲೆಯೂ ಬ್ರೇಕ್
ಮಾಧ್ಯಮದಲ್ಲಿ ವರದಿ ಆಧರಿಸಿ ಬಂಡೀಪುರ ಎಸಿಎಫ್ ಹಾಗೂ ಮೂಲೆಹೊಳೆ ಆರ್ಎಫ್ಓ ವಿಚಾರಣೆ ನಡೆಸಿ ಆಂಧ್ರಪ್ರದೇಶ ರಾಜ್ಯದ ವಿಶಾಖಪಟ್ಟಣಂ ನಿವಾಸಿಗಳಿಗೆ 25 ಸಾವಿರ ದಂಡ ಹಾಕಿದ್ದಾರೆ ಎಂದು ಸಿಎಫ್ ರಮೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.