Karnataka HC : ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಸಿಜೆ ಆಗಿ ನ್ಯಾ. ಆರಾಧೆ ನೇಮಕ!

ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಅಧಿಕಾರದಿಂದ ನಿರ್ಗಮಿಸುವ  ಅವರ ಸ್ಥಾನಕ್ಕೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಅವರನ್ನ ನೇಮಿಸಲಾಗಿದೆ. 

Written by - Channabasava A Kashinakunti | Last Updated : Jun 30, 2022, 01:58 PM IST
  • ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ
  • ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅಧಿಕಾರದಿಂದ ನಿವೃತ್ತ
  • ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು
Karnataka HC : ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಸಿಜೆ ಆಗಿ ನ್ಯಾ. ಆರಾಧೆ ನೇಮಕ! title=

ನವದೆಹಲಿ : ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ. ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ, ಅವರ ಸ್ಥಾನಕ್ಕೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಅವರನ್ನ ನೇಮಿಸಲಾಗಿದೆ. 

ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಆರಾಧೆ ಅವರನ್ನು ನೇಮಕ ಮಾಡಲಾಗಿದೆ.  ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡಿದ್ದಾರೆ. 

ಇದನ್ನೂ ಓದಿ : FIR Against BJP leader: ಬಿಜೆಪಿ ಮುಖಂಡನ ವಿರುದ್ದ ಎಫ್‌ಐಆರ್‌ ದಾಖಲು

ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ಜುಲೈ 3 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನ್ಯಾಯಮೂರ್ತಿ ಅವಸ್ತಿ ಅವರು ಜುಲೈ 2 ರಂದು ತಮ್ಮ 62 ನೇ ಹುಟ್ಟುಹಬ್ಬದ ಮುನ್ನಾದಿನದಂದು ನಿವೃತ್ತರಾಗಲಿದ್ದಾರೆ. 

ಸುಪ್ರೀಂ ಕೋರ್ಟ್ ನ್ಯಾಯಾಧೀಶರು 65 ವರ್ಷ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ, ಹೈ ಕೋರ್ಟ್ ನ್ಯಾಯಾಧೀಶರು 62 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.

ಇದನ್ನೂ ಓದಿ : ಪೊಲೀಸ್ ಸಿಬ್ಬಂದಿ ವರ್ಗಾವಣೆ : ರಾತ್ರಿಯಿಡೀ ಕಮಿಷನರ್ ಕಚೇರಿಯಲ್ಲಿ ಕೌನ್ಸಿಲಿಂಗ್

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News