ನವದೆಹಲಿ : ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ. ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ, ಅವರ ಸ್ಥಾನಕ್ಕೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಅವರನ್ನ ನೇಮಿಸಲಾಗಿದೆ. 


COMMERCIAL BREAK
SCROLL TO CONTINUE READING

ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಆರಾಧೆ ಅವರನ್ನು ನೇಮಕ ಮಾಡಲಾಗಿದೆ.  ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡಿದ್ದಾರೆ. 


FIR Against BJP leader: ಬಿಜೆಪಿ ಮುಖಂಡನ ವಿರುದ್ದ ಎಫ್‌ಐಆರ್‌ ದಾಖಲು


ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ಜುಲೈ 3 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.


ನ್ಯಾಯಮೂರ್ತಿ ಅವಸ್ತಿ ಅವರು ಜುಲೈ 2 ರಂದು ತಮ್ಮ 62 ನೇ ಹುಟ್ಟುಹಬ್ಬದ ಮುನ್ನಾದಿನದಂದು ನಿವೃತ್ತರಾಗಲಿದ್ದಾರೆ. 


ಸುಪ್ರೀಂ ಕೋರ್ಟ್ ನ್ಯಾಯಾಧೀಶರು 65 ವರ್ಷ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ, ಹೈ ಕೋರ್ಟ್ ನ್ಯಾಯಾಧೀಶರು 62 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.


ಇದನ್ನೂ ಓದಿ : ಪೊಲೀಸ್ ಸಿಬ್ಬಂದಿ ವರ್ಗಾವಣೆ : ರಾತ್ರಿಯಿಡೀ ಕಮಿಷನರ್ ಕಚೇರಿಯಲ್ಲಿ ಕೌನ್ಸಿಲಿಂಗ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.