ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ದಿನೇಶ್ ಮಹೇಶ್ವರಿ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.
ರಾಜಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಪ್ರಮಾನವಚನ ಬೋಧಿಸಿದರು.
ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು 1958 ರಲ್ಲಿ ಜೋಧ್ಪುರ್ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿಯನ್ನು ಪಡೆದರು. ನಂತರ ರಾಜಸ್ಥಾನದ ವಿವಿಧ ಸ್ಥಳಗಳಲ್ಲಿ ವಕೀಲರಾಗಿ ಅಭ್ಯಾಸ ಮತ್ತು 2004 ರಲ್ಲಿ ರಾಜಸ್ಥಾನ್ ಹೈಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದರು. ನಂತರ 2014 ರಲ್ಲಿ ಅಲಹಾಬಾದ್ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿದರು. ನಂತರ 2016 ರಲ್ಲಿ ಮೇಘಾಲಯ ಹೈಕೋರ್ಟ್ನ ಉಸ್ತುವಾರಿಯನ್ನು ವಹಿಸಿಕೊಂಡರು.
ಜನವರಿ 10ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ 5 ಸದಸ್ಯರ ಕೊಲಿಜಿಯಂ ದಿನೇಶ್ ಮಹೇಶ್ವರಿ ಅವರನ್ನು ನೇಮಕ ಮಾಡಲು ತೀರ್ಮಾನಿಸಿ, ಕೇಂದ್ರ ಸರ್ಕಾರಕ್ಕೆ ಹೆಸರನ್ನು ಶಿಫಾರಸು ಮಾಡಿತ್ತು.