ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರ್ ರನ್ನು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾಗಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ ನೇಮಕ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ 1958 ರಲ್ಲಿ ಜನಿಸಿ ಮುಂದೆ ಜೋಧ್ಪುರ್ ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿಯನ್ನು ಪಡೆದರು. ನಂತರ ರಾಜಸ್ಥಾನದ ವಿವಿಧ ಸ್ಥಳಗಳಲ್ಲಿ ವಕೀಲರಾಗಿ ಅಭ್ಯಾಸ ಮಾಡಿದರು. 2004 ರಲ್ಲಿ ರಾಜಸ್ಥಾನ್ ಹೈಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದರು. 2014 ರಲ್ಲಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸಿದರು. 2016 ರಲ್ಲಿ ಮೇಘಾಲಯ ಹೈಕೋರ್ಟ್ನ ಉಸ್ತುವಾರಿಯನ್ನು ವಹಿಸಿಕೊಂಡರು.ಕರ್ನಾಟಕ ಹೈಕೋರ್ಟ್ ನಲ್ಲಿ  ಮುಖ್ಯನ್ಯಾಯಮೂರ್ತಿಯಾಗುವ ಮೊದಲು ಹಲವಾರು ಹೈಕೋರ್ಟ್ಗಳಲ್ಲಿ ಕಾರ್ಯ ನಿರ್ವಹಿಸಿದರು. 



ಇದಾದ ನಂತರ ದಿನೇಶ್ ಮಹೇಶ್ವರಿ ಕೊಲಿಜಿಯಂ ಪದ್ದತಿಯ ಮೂಲಕ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದರು.ಈಗ ಅವರನ್ನು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾಗಿ ನೇಮಕ ಮಾಡಿದ್ದಾರೆ.