ಶಿವಮೊಗ್ಗ: ತಿಂಗಳ ಒಳಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.


COMMERCIAL BREAK
SCROLL TO CONTINUE READING

ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಬಳಿಕ ಅವರಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಿಕೆ ಕುರಿತು ತರಬೇತಿ ನೀಡಲಾಗುವುದು. ಗ್ರಾಮ ಪಂಚಾಯತ್(Grama Panchayat) ವ್ಯವಸ್ಥೆ ಬಲಪಡಿಸಲು ನಿರಂತರ ತರಬೇತಿ ಹಮ್ಮಿಕೊಳ್ಳಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.


'ಬಿಜೆಪಿ ಶೇ 60 ರಷ್ಟು ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದೆ'


ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ರಾಜ್ಯದ 92,131 ಸದಸ್ಯರಿಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ಜನವರಿ 19ರಿಂದ ಮಾರ್ಚ್ 26ರವರೆಗೆ ತಾಲ್ಲೂಕು ಹಂತದಲ್ಲಿ ತರಬೇತಿ ನೀಡಲಾಗುವುದು. ರಾಜ್ಯದ 176 ತಾಲ್ಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ಕಡೆ ಎರಡು ಕೇಂದ್ರಗಳನ್ನು ಗುರುತಿಸಲಾಗಿದೆ. 900 ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. 40 ಸದಸ್ಯರಿಗೆ ಒಂದು ತಂಡ ರಚಿಸಲಾಗಿದೆ. ಪ್ರತಿ ತಂಡಕ್ಕೆ 5 ದಿನಗಳು ತರಬೇತಿ ನೀಡಲಾಗುವುದು ಎಂದರು.


Karnataka Gram Panchayat Election Results 2020: ಗದಗ ಜಿಲ್ಲೆಯಲ್ಲಿ ಕಾಮ್ರೆಡ್ ಗಳ ಮಿಂಚು


ಪ್ರತಿ ದಿನ ಬೆಳಿಗ್ಗೆ 10.30ರಿಂದ ಸಂಜೆ 4ರವರೆಗೆ ತರಬೇತಿ ನಡೆಯಲಿದೆ. 15 ವಿಷಯಾಧಾರಿತ ಅಧಿವೇಶನಗಳು ಮತ್ತು ಕೌಶಲ ಮಾಹಿತಿ ನೀಡಲಾಗುವುದು. ಸದಸ್ಯರಿಗೆ ಪ್ರಯಾಣ ಭತ್ಯೆ, ಭಾಗವಹಿಸುವಿಕೆ ಭತ್ಯೆ ನೀಡಲಾಗುವುದು. ತರಬೇತಿಗೆ ಅಂದಾಜು ₹ 27.16 ಕೋಟಿ ವೆಚ್ಚವಾಗಲಿದೆ ಎಂದು ವಿವರ ನೀಡಿದರು.


Grama Panchayat: ಗ್ರಾ. ಪಂ. ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಶುರುವಾಯ್ತು 'ಬಿಗ್ ಫೈಟ್'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.