ಬೆಂಗಳೂರು:  ಕನ್ನಡದ ನಿತ್ಯೋತ್ಸವ ಕವಿ ಎಂದೇ ಹೆಸರಾಗಿದ್ದ ಪ್ರೊ.ಕೆ.ಎಸ್.ನಿಸಾರ್ ಅಹಮದ್ ತಮ್ಮ 84ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಇತ್ತೀಚಿಗೆ ಅಸ್ಪತ್ರೆಗೆ ದಾಖಲಾಗಿದ್ದ ಅವರು ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ನಿಧರಾಗಿದ್ದಾರೆ.


COMMERCIAL BREAK
SCROLL TO CONTINUE READING

'ಕೊಕ್ಕರೆಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್' ಅವರು ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5,1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು.



ನಿಸಾರ್ ಅಹಮದ್  ಅವರ ಸಾಹಿತ್ಯಾಸಕ್ತಿ 10ನೇ ವಯಸ್ಸಿನಲ್ಲೇ ಆರಂಭ.'ಜಲಪಾತ'ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ (2018) 21 ಕವನ ಸಂಕಲನಗಳು, 14 ವೈಚಾರಿಕೆ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ.


ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ,ಮಾಸ್ತಿ ಪ್ರಶಸ್ತಿ ,ಪಂಪ ಪ್ರಶಸ್ತಿ,ಗೊರೋರು ಪ್ರಶಸ್ತಿಗಳು ದೊರೆತಿವೆ. ಇಷ್ಟೇ ಅಲ್ಲದೇ ಶಿವಮೊಗ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು.