ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ಜೂನ್ 5 ರವರೆಗೆ ವಿಸ್ತರಣೆ

ಮೈಸೂರು ವಿವಿಯಿಂದ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-(ಕೆ-ಸೆಟ್) ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 5 ರವರೆಗೆ ವಿಸ್ತರಿಸಲಾಗಿದೆ.

Last Updated : May 31, 2020, 09:25 PM IST
ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ಜೂನ್ 5 ರವರೆಗೆ ವಿಸ್ತರಣೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಮೈಸೂರು ವಿವಿಯಿಂದ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-(ಕೆ-ಸೆಟ್) ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 5 ರವರೆಗೆ ವಿಸ್ತರಿಸಲಾಗಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಸಿಎಂ ಡಾ.ಅಶ್ವತ್ ನಾರಾಯಣ್ 'ಕೆ-ಸೆಟ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಜೂನ್ 5 ರವರೆಗೆ ವಿಸ್ತರಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ PhD ಅಥವಾ KSET (http://kset.uni-mysore.ac.in) ಕಡ್ಡಾಯ.ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ದಂಡ ಸಹಿತ 250 ರೂ ಗಳ ಮೂಲಕ ಪಾವತಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
 

Trending News