ಕಾಂಗ್ರೆಸ್ ಶಾಸಕ ರಾಜು ಕಾಗೆ ಪುತ್ರಿ ವಿಧಿವಶ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!!

ಬೆಳಗಾವಿ ಜಿಲ್ಲೆಯ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಅವರು ವಿಧಿವಶರಾಗಿದ್ದಾರೆ. ಶಾಸಕ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಅಂತ್ಯಕ್ರಿಯೆ ನೆರವೇರಿದೆ ಎಂದು ತಿಳಿದುಬಂದಿದೆ. 

Written by - Puttaraj K Alur | Last Updated : Mar 2, 2025, 09:20 PM IST
  • ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ವಿಧಿವಶ
  • ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ನಿಧನ
  • ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಕೃತಿಕಾರ ಅಂತ್ಯಕ್ರಿಯೆ
ಕಾಂಗ್ರೆಸ್ ಶಾಸಕ ರಾಜು ಕಾಗೆ ಪುತ್ರಿ ವಿಧಿವಶ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!!
ರಾಜು ಕಾಗೆ ಪುತ್ರಿ ಕೃತಿಕಾ ವಿಧಿವಶ

Raju Kage Daughter passes away: ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (37) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶನಿವಾರ (ಮಾರ್ಚ್‌ 1) ನಿಧನರಾಗಿದ್ದಾರೆ. 

Add Zee News as a Preferred Source

ಕಳೆದ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರೈಲ್ವೆ ನಿಲ್ದಾಣದ ಕಾಮಗಾರಿ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕ ಕೊನೆಗೂ ಬಚಾವ್

ಕೃತಿಕಾರ ನಿಧನದ ಸುದ್ದಿ ತಿಳಿದು ಅವರ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ. ಪ್ರೀತಿಯ ಮಗಳನ್ನು ಕಳೆದುಕೊಂಡ ರಾಜು ಕಾಗೆ ದಂಪತಿ ಶೋಕದಲ್ಲಿ ಮುಳುಗಿದೆ. ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಕೃತಿಕಾರ ಅಂತ್ಯಕ್ರಿಯೆ ನೆರವೇರಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದ್ದಾರೆ.

ಶಾಸಕ ರಾಜು ಕಾಗೆ ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ಈ ಪೈಕಿ ಕೃತಿಕಾ ಹಿರಿಯ ಪುತ್ರಿಯಾಗಿದ್ದರು. ಅವರು ನೇರಲಿ ಗ್ರಾಮದ ನಿವಾಸಿ ಡಾ.ಅನಿಲ್‌ ಪಾಟೀಲ್‌ ಅವರನ್ನು ಮದುವೆಯಾಗಿದ್ದರು. ಈ ದಂಪತಿಗೆ ಮೂರು ವರ್ಷದ ಮಗಳಿದ್ದಾಳೆ.

ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಕೃತಿಕಾ ಅವರು ನಿಧನ ಹೊಂದಿದ್ದರಿಂದ ಗ್ರಾಮಸ್ಥರು, ರಾಜು ಕಾಗೆ ಸಂಬಂಧಿಗಳು ಹಾಗೂ ಸ್ನೇಹಿತರು ಕಂಬನಿ ಮಿಡಿದ್ದಾರೆ. ಕೃತಿಕಾರ ಅಕಾಲಿಕ ನಿಧನಕ್ಕೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೈ ನಾಯಕರ ಐಷಾರಾಮಿ ಮನೆಯಿಂದ ಬಡವರಿಗೆ ಸಂಕಷ್ಟ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
    

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News