ಕಲಬುರಗಿ : ಪಿಎಸ್‌ಐ ಹಗರಣ ಬೆನ್ನಲ್ಲೆ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಯಲ್ಲಿ ಕಂಡಕ್ಟರ್ ಆಗಲು ಅಭ್ಯರ್ಥಿಗಳು ವಾಮಮಾರ್ಗ ಪತ್ತೆಯಾಗಿ ಸಿಕ್ಕಿ ಬಿದ್ದಿದ್ದಾರೆ. 


COMMERCIAL BREAK
SCROLL TO CONTINUE READING

ದೇಹದಾರ್ಢ್ಯ ಪರೀಕ್ಷೆ ವೇಳೆ ತೂಕ ಹೆಚ್ಚಿಸಿಕೊಳ್ಳಲು ವಾಮಮಾರ್ಗಕ್ಕೆ ಅಭ್ಯರ್ಥಿಗಳು ಕಾಲಿಗೆ ಕಬ್ಬಿಣ ಕಟ್ಟಿಕೊಂಡು ಬಂದಿರುವುದನ್ನ ಕೆಕೆಆರ್‌ಟಿಸಿ ಅಧಿಕಾರಿಗಳು ಪತ್ತೆ ಹಚ್ಚಿಸಿದ್ದಾರೆ. ಅಭ್ಯರ್ಥಿಗಳು 5-10 ಕೆಜಿ ತೂಕದ ಕಬ್ಬಿಣ ತೊಡೆಗೆ ಕಟ್ಟಿಕೊಂಡು ಹಾಜರಾಗಿದ್ದರು. ಪರಿಶೀಲನೆ ವೇಳೆ ಸಿಕ್ಕಿಬಿದ್ದ ಹಲವು ಅಭ್ಯರ್ಥಿಗಳನ್ನ ನೇಮಕಾತಿ ಪ್ರಕ್ರಿಯೆಯಿಂದ ಕೈಬಿಡಲಾಗಿದೆ. ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ.


ಇದನ್ನೂ ಓದಿ : ಇಂದಿನಿಂದ ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭ


ಡ್ರೈವರ್ ಕಂ ಕಂಡಕ್ಟರ್ ನೇಮಕಾತಿ ವೇಳೆ ಅಕ್ರಮ ಬಯಲಿಗೆ


ಕೆಕೆಆರ್‌ಟಿಸಿಯಿಂದ 1619 ಜನ ಕಂಡಕ್ಟರ್ ಕಂ ಡ್ರೈವರ್ ಹುದ್ದೆಗಳ ನೇಮಕಾತಿಗೆ ಈ ಹಿಂದೆ ಅರ್ಜಿ ಕರೆಯಲಾಗಿತ್ತು. ಸರಿಸುಮಾರು 39 ಸಾವಿರ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ಅರ್ಜಿ ಹಾಕಿದವರಿಗೆ ದೇಹದಾರ್ಡ್ಯ ಪರೀಕ್ಷೆಗೆ, ಕಲಬುರಗಿ ನಗರದ ಕೆಕೆಆರ್​ಟಿಸಿ ಕೇಂದ್ರ ಕಚೇರಿ ಪಕ್ಕದಲ್ಲಿ ಕಳೆದ ಒಂದೂವರೆ ತಿಂಗಳಿಂದ ನಡೆಯುತ್ತಿದೆ. ಪ್ರತಿದಿನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ದೇಹದಾರ್ಢ್ಯ ಪರೀಕ್ಷೆ ನಡೆಯುತ್ತಿದೆ. 


ಕಂಡಕ್ಟರ್ ಕಂ ಡ್ರೈವರ್​ ಹುದ್ದೆಗೆ 163 ಸೆಂಟಿ ಮೀಟರ್ ಎತ್ತರ ಮತ್ತು 55 ಕಿಲೋ ತೂಕ ಅಭ್ಯರ್ಥಿಗಳು ಹೊಂದಿರಬೇಕು. ಅಂತವರು ಮಾತ್ರ ದೇಹದಾರ್ಢ್ಯ ಪರೀಕ್ಷೆಯಲ್ಲಿ ಆಯ್ಕೆಯಾಗುತ್ತಾರೆ. ಆದರೆ ಕೆಲ ಕಡಿಮೆ ತೂಕ ಹೊಂದಿರುವ ಅಭ್ಯರ್ಥಿಗಳು, ದೇಹದಾರ್ಢ್ಯ ಪರೀಕ್ಷೆಯಲ್ಲಿ ಆಯ್ಕೆಯಾಗಲು, ಒಳಉಡುಪುಗಳಲ್ಲಿ ಐದರಿಂದ ಹತ್ತು ಕಿಲೋ ತೂಕದ ಕಬ್ಬಿಣದ ಕಲ್ಲು, ಕಬ್ಬಿಣದ ಪಟ್ಟಿ, ಸರಪಳಿ ಕಟ್ಟಿಕೊಂಡು ಬಂದು ದೇಹದಾರ್ಡ್ಯ ಪರೀಕ್ಷೆಯಲ್ಲಿ ತಮ್ಮ ತೂಕವನ್ನು ತೋರಿಸಲು ಬಂದಿದ್ದರು. ಹೀಗೆ ಬಂದ ನಾಲ್ವರ ಕಳ್ಳಾಟವನ್ನು ಪತ್ತೆ ಹಚ್ಚುವಲ್ಲಿ ಸಾರಿಗೆ ಸಂಸ್ಥೆಯ ನೇಮಕಾತಿ ವಿಭಾಗದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.


ಸಾಕಷ್ಟು ವಿರೋಧದ ನಡುವೆಯೂ ಆರಂಭಗೊಳ್ಳುತ್ತಿದೆ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.