ಕಲಬುರಗಿ:  ಪ್ರಸಕ್ತ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ‌ ಮೂರು ದಿನದಲ್ಲಿ ಅಂದರೆ (ಜುಲೈ 26 ರಿಂದ 28 ವರೆಗೆ) ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದರಿಂದ ಬೆಳೆ ಹಾನಿಯಾಗಿರುವ ಸಾಧ್ಯತೆ ಇರುವ ಕಾರಣ ಬೆಳೆ ವಿಮೆ ಮಾಡಿಸಿದ ರೈತರು ದೂರು ದಾಖಲಿಸಲು ಯೂನಿವರ್ಸಲ್ ಸೊಂಪೂ ಜನರಲ್ ಇನ್ಶುರೆನ್ಸ್ ಕಂಪನಿಯ ಟೋಲ್ ಫ್ರೀ ಸಂ.1800-200-5142 ಗೆ ಸಂಪರ್ಕಿಸಿದಾಗ ತಾಂತ್ರಿಕ ತೊಂದರೆ ಕಂಡು ಬರುತ್ತಿರುವದರಿಂದ ರೈತರು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇದೇ ಜುಲೈ 31 ರೊಳಗೆ ಲಿಖಿತ ದೂರು ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ


ಜುಲೈ 29 ಮತ್ತು 30 ರಂದು ಸಾರ್ವತ್ರಿಕ ರಜೆ ಇದ್ದರೂ ಸಹ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳು ತೆರೆದಿರಲಿದ್ದು, ರೈತರಿಂದ ದೂರು ಸ್ವೀಕರಿಸುವಂತೆ ವಿಮಾ ಸಂಸ್ಥೆಯ ಪ್ರತಿನಿಧಿಗಳಿಗೆ ಈಗಾಗಲೆ ಸೂಚನೆ ನೀಡಲಾಗಿದೆ. ಹೀಗಾಗಿ ಬೆಳೆ ಹಾನಿಯಾದ ಜಮೀನಿನ ರೈತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ವಿಮೆ ಪಾವತಿ ದಾಖಲೆಯೊಂದಿಗೆ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಹೋಗಿ ಲಿಖಿತ ದೂರು ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ


ತಡವಾಗಿ ಬಂದ ಅರ್ಜಿ ನಿರಾಕರಿಸುವ ಸಾಧ್ಯತೆ ಇರುವ ಕಾರಣ ಬೆಳೆ ಹಾನಿಯಾದ ರೈತರು ಕೂಡಲೇ ಲಿಖಿತ ದೂರು ನೀಡುವಂತೆ ರೈತ ಬಾಂಧವರಲ್ಲಿ ಸಮದ್ ಪಟೇಲ್ ಅವರು ಕೋರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.