Karwar Rain Updates: ಕಾರವಾರದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ ಸೇತುವೆ ಕುಸಿತ

Bridge collapse at Karwar: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿಯಿದ್ದ ಈ ಸೇತುವೆ ನಿನ್ನೆ ಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕುಸಿದಿದೆ.

Written by - Chetana Devarmani | Last Updated : Aug 7, 2024, 08:23 AM IST
  • ಕಾರವಾರದಲ್ಲಿ ಕುಸಿದು ಬಿದ್ದ ಸೇತುವೆ
  • ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ
  • ಏಕಾಏಕಿ ಕುಸಿದು ಬಿದ್ದ 41 ವರ್ಷಗಳ ಹಳೆ ಸೇತುವೆ
Karwar Rain Updates: ಕಾರವಾರದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ ಸೇತುವೆ ಕುಸಿತ title=

Kali River Bridge Collapse In Karwar: ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿಯಿದ್ದ ಈ ಸೇತುವೆ ನಿನ್ನೆ ಧ್ಯ ರಾತ್ರಿ 1 ಗಂಟೆ ಸುಮಾರಿಗೆ ಕುಸಿದಿದೆ. ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ 41 ವರ್ಷಗಳ ಹಳೆ ಸೇತುವೆ ಏಕಾಏಕಿ ಕುಸಿದು ಬಿದ್ದಿದೆ. 

ಈ ವೇಳೆ ಸೇತುವೆ ಮೇಲೆ ಹೋಗುತ್ತಿದ್ದ ಲಾರಿ ನದಿಗೆ ಬಿದ್ದಿದೆ. ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್ (37) ಸಹ ನದಿಗೆ ಬಿದ್ದಿದ್ದರು. ತಮಿಳುನಾಡು ಮೂಲದ SSM ಟ್ರಾನ್ಸಪೋರ್ಟ ಕಂಪನಿಗೆ ಸೇರಿದ TN-52 AC -6880 ನೊಂದಣಿಯ ಖಾಲಿ ಟ್ರಕ್ ನದಿಗೆ ಬಿದ್ದಿದೆ. ಬೀಟ್ ಪೊಲೀಸರ ಮುಂಜಾಗೃತೆಯಿಂದ ಲಾರಿ ಚಾಲಕನಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಪೊಲೀಸರು ಲಾರಿ ಚಾಲಕನ ರಕ್ಷಣೆಯನ್ನು ಮಾಡಿದ್ದಾರೆ.  

ಇದನ್ನೂ ಓದಿ: ಸಿಎಂ ಪರ ನಿಂತ ಅಹಿಂದ, ಕುರುಬ ಸಮಾಜ: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸುವ ಕುತಂತ್ರ ಎಂದು ವಾಗ್ಧಾಳಿ

ವಿಷಯ ತಿಳಿಯುತ್ತಿದ್ದಂತೆ ಕಾರವಾರ ಎಸ್‌ಪಿ ನಾರಾಯಣ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರ ತಂಡ ನದಿಗೆ ಇಳಿದು ಚಾಲಕನನ್ನು ರಕ್ಷಿಸಿದ್ದಾರೆ. ಸ್ಥಳೀಯ ಮೀನುಗಾರರು ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಬೋಟ್ ಮೂಲಕ ಲಾರಿ ಚಾಲಕ ಬಾಲ್ ಮುರುಗನ್ ಅವರನ್ನು ರಕ್ಷಿಸಿದ್ದಾರೆ. 

ಗೋವಾದಿಂದ ಹುಬ್ಬಳ್ಳಿ ಕಡೆ ಲಾರಿ ತೆರಳುತ್ತಿತ್ತು. ಸೇತುವೆ ಮೇಲೆ ತೆರಳುತಿದ್ದಂತೆ ಮೊದಲ ಭಾಗ ಕುಸಿದಿದೆ. ಆ ಬಳಿಕ ಮೂರು ಕಡೆ ಕುಸಿದು ಹೋಗಿದೆ. ಸದ್ಯ ಟ್ರಕ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನದಿಗೆ ನಿರ್ಮಿಸಿದ್ದ ಇನ್ನೊಂದು ಸೇತುವೆಯ ಮೇಲೆ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪನ ತಟ್ಟೆಯಲ್ಲಿ ಕತ್ತೆಯೇ ಸತ್ತು ಬಿದ್ದಿದೆ: ಸಿಎಂ ಸಿದ್ದರಾಮಯ್ಯ

ಸೇತುವೆ ಕುಸಿತದ ವೇಳೆ ಮತ್ತೆ ಕೆಲವು ವಾಹನಗಳು ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಕಾಳಿ ನದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ಕಾರವಾರ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಈ ಸೇತುವೆ ಸುಮಾರು 41 ವರ್ಷಗಳಷ್ಟು ಹಳೆಯದಾಗಿದ್ದು, ಗೋವಾ - ಕಾರವಾರ ನಡುವೆ ಸಂಪರ್ಕ ಕಲ್ಪಿಸಲು ನಿರ್ಮಿಸಲಾಗಿತ್ತು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News