ಚಿಕ್ಕಬಳ್ಳಾಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ತಮ್ಮ ರಾಜಕೀಯ ನಿವೃತ್ತಿಯ ಮಾತುಗಳನ್ನು ಆಡಿರುವ ಬಗ್ಗೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್(Kalladka Prabhakar Bhat) ಸ್ಫೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ.
ನಗರದಲ್ಲಿ ಈ ಕುರಿತಂತೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ರಾಜ್ಯದಲ್ಲಿ ಕಷ್ಟಪಟ್ಟು ಪಕ್ಷ ಕಟ್ಟಿ ಬೆಳೆಸಿರುವ ನಾನು ಮುಂದಿನ ಮೂರೂವರೆ ವರ್ಷ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುತ್ತೇನೆ. ಆದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಚುನಾವಣಾ ರಾಜಕೀಯದಿಂದ ದೂರ ಉಳಿಯುವ ಬಗ್ಗೆ ಸಿಎಂ ಯಡಿಯೂರಪ್ಪ ತಮ್ಮ ಬಳಿ ಹೇಳಿಕೊಂಡಿರುವುದಾಗಿ ತಿಳಿಸಿದರು.
ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವುದಕ್ಕಿಂತ ಬೇರೆ ಇನ್ನೇನಿದೆ... ಎಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಾವು ಸಿಎಂ ಸ್ಥಾನದಲ್ಲಿ ಇರುವವರೆಗೂ ಜನರಿಗಾಗಿ ಜನಪರ ಕೆಲಸ ಮಾಡುತ್ತೇನೆ. ಅದು ನನಗೆ ತೃಪ್ತಿ ತರಲಿದೆ. ಆದರೆ ಆನಂತರದ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ. ಚುನಾವಣೆಯಿಂದಷ್ಟೇ ದೂರು ಉಳಿಯುತ್ತೇನೆ. ಆದರೆ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಶ್ರಮಿಸುವುದಾಗಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರು ಬಿಎಸ್‌ವೈ ಮುಂದಿನ ರಾಜಕೀಯದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾರೆ.