ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸರ್ದಾರ ವಲ್ಲಭ್‌ಭಾಯಿ ಪಟೇಲ್ ಪುತ್ಥಳಿಗೆ ಸಿಎಂ ಮಾಲಾರ್ಪಣೆ

ಕಲಬುರಗಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿಯವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

Written by - Puttaraj K Alur | Last Updated : Sep 17, 2022, 11:49 AM IST
  • 75ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ
  • ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣ
  • ಸರ್ದಾರ್ ವಲ್ಲಭ್‍ಭಾಯ್ ಪಟೇಲ್ ಪುತ್ಥಳಿಗೆ ಸಿಎಂ ಬೊಮ್ಮಾಯಿ ಮಾಲಾರ್ಪಣೆ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸರ್ದಾರ ವಲ್ಲಭ್‌ಭಾಯಿ ಪಟೇಲ್ ಪುತ್ಥಳಿಗೆ ಸಿಎಂ ಮಾಲಾರ್ಪಣೆ  title=
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನೆಗಿಂದು 75 ವರ್ಷ. ಈ ಹಿನ್ನೆಲೆ ಕಲ್ಯಾಣ ಕರ್ನಾಟಕದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಇಂದು ಕಲಬುರಗಿಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ್ ವಲ್ಲಭ್‍ಭಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.  

ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿಯವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ಪೊಲೀಸ್ ತುಕಡಿಗಳಿಂದ ಸಿಎಂಗೆ ಗೌರವ ವಂದನೆ ಸಲ್ಲಿಸಲಾಯಿತು.

ಇದನ್ನೂ ಓದಿ: "ಮತಾಂತರ ನಿಷೇಧ ವಿಧೇಯಕ ಧಾರ್ಮಿಕ ಸ್ವಾತ್ತಂತ್ರ್ಯದ ಹಕ್ಕುಗಳನ್ನು ಕಸಿಯುವ ವಿಧೇಯಕವಾಗಿದೆ"

ರಾಯಚೂರಿನಲ್ಲಿ ಹಬ್ಬದ ವಾತಾವರಣ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಪ್ರಯುಕ್ತ ರಾಯಚೂರಿನಲ್ಲಿ ಸರ್ದಾರ್ ವಲ್ಲಭ್‍ಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ನಗರದ ಪಟೇಲ್ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿದ ಡಿಸಿ ಚಂದ್ರಶೇಖರ ನಾಯಕ್ ಗೌರವವಂದನೆ ಸಲ್ಲಿಸಿದರು. ಇದೇ ವೇಳೆ ಜಿಲ್ಲಾ ಪೊಲೀಸ್ ವತಿಯಿಂದ ಕವಾಯತು ನಡೆಯಿತು. ರಾಯಚೂರು ಎಸ್‍ಪಿ, ನಗರಸಭೆ ಅಧ್ಯಕ್ಷರು, ಸದಸ್ಯರು ಸೇರಿ ಹಲವರು ಭಾಗಿಯಾಗಿದ್ದರು.

ಕೊಪ್ಪಳದಲ್ಲಿ ಆನಂದ್ ಸಿಂಗರಿಂದ ಧ್ವಜಾರೋಹಣ

75ನೇ ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್‍ ಧ್ವಜಾರೋಹಣ ನೆರವೇರಿಸಿದರು. ಕೊಪ್ಪಳ ಜಿಲ್ಲಾಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತೆರೆದ ವಾಹನದಲ್ಲಿ ಸಚಿವ ಆನಂದ್ ಸಿಂಗ್ ಗೌರವ ವಂದನೆ ಸ್ವೀಕರಿಸಿದರು. ಇದೇ ವೇಳೆ 12 ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಉತ್ಸವದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ್, ಡಿಸಿ, ಎಸ್ಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ರಾಜ್ಯದ 22 ಸರಕಾರಿ ಡಿಗ್ರಿ ಕಾಲೇಜುಗಳ ಅಭಿವೃದ್ಧಿಗೆ ಉದ್ಯಮಿಪತಿಗಳ ಒಲವು

ವಿಜಯನಗರದಲ್ಲಿಯೂ ಕಲ್ಯಾಣ ಕರ್ನಾಟಕ ಉತ್ಸವ

ವಿಜಯನಗರ ಜಿಲ್ಲೆಯಲ್ಲಿಯೂ ಸಂಭ್ರಮ-ಸಡಗರದ ಕಲ್ಯಾಣ ಕರ್ನಾಟಕ ಉತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಧ್ವಜಾರೋಹಣ ನೆರವೇರಿಸಿದರು. ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಂಸದ ದೇವೇಂದ್ರಪ್ಪ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News