ಏಪ್ರಿಲ್ 8 ರಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ

ಕನ್ನಡ ಪುಸ್ತಕ ಪ್ರಾಧಿಕಾರವು ಏಪ್ರಿಲ್ 08 ರಿಂದ 13 ರವರೆಗೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದೆ.

Written by - Zee Kannada News Desk | Last Updated : Mar 27, 2022, 12:39 AM IST
  • ಕನ್ನಡ ಪುಸ್ತಕ ಪ್ರಾಧಿಕಾರವು ಏಪ್ರಿಲ್ 08 ರಿಂದ 13 ರವರೆಗೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದೆ.
ಏಪ್ರಿಲ್ 8 ರಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ title=

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು ಏಪ್ರಿಲ್ 08 ರಿಂದ 13 ರವರೆಗೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದೆ.

ಇದನ್ನೂ ಓದಿ: Toofan Lyrical Video: 'ಕೆಜಿಎಫ್​​ 2' ಚಿತ್ರದ ಮೊದಲ ಲಿರಿಕಲ್​ ವಿಡಿಯೋ ರಿಲೀಸ್​

ಈ ಪುಸ್ತಕ ಮೇಳದಲ್ಲಿ ಕನ್ನಡ (Kannada) ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ಒಂದು ದಿನಕ್ಕೆ ರೂ.500/-ರಂತೆ ಆರು (06) ದಿನಗಳಿಗೆ ರೂ.3,000/- ಗಳ ಬಾಡಿಗೆ ಹಾಗೂ ಒಂದು ಮಳಿಗೆಗೆ ರೂ.1,000/- ಗಳ ಠೇವಣಿ ಮೊತ್ತದ ಪ್ರತ್ಯೇಕ ಡಿ.ಡಿ.ಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಪಡೆದು ಸಲ್ಲಿಸಬೇಕು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ (Kannada Pustaka Pradhikara), ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: KGF Chapter 2: ಯಶ್ ಫ್ಯಾನ್ಸ್‌ಗೆ ಸಿಕ್ತು ಗುಡ್ ನ್ಯೂಸ್, ಬಾಕ್ಸ್ ಆಫೀಸ್ ಶೇಕ್ ಮಾಡಲು ‘ರಾಕಿ ಬಾಯ್’ ಸಜ್ಜು!

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಏಪ್ರಿಲ್ 06 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ವಿಳಾಸಕ್ಕೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ಮೂಲಕ ಸಲ್ಲಿಸಬೇಕು.ಮೇಳದಲ್ಲಿ ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ ಅಥವಾ ಪ್ರಾಧಿಕಾರದ  ಕಚೇರಿ ಅಥವಾ ದೂ.ಸಂ: 080-22484516 / 22107704 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಹಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News