ಬೆಂಗಳೂರು: ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಿರಿಕ್ ಪಾರ್ಟಿ ರಶ್ಮಿಕಾ ಮಂದಣ್ಣ ಹತ್ತಿದ್ದ ಏಣಿಯನ್ನೇ ಒದಿಯಲು ಮುಂದಾದ್ರ...?


ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನ್ಯಾಷನಲ್ ಜಿಯಾಗ್ರಫಿ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಡಬ್ಬಿಂಗ್ ಆಗಿ ಪ್ರಸಾರವಾಗುತ್ತಿದ್ದು, ಭೂ ಜೀವ ಜಗತ್ತಿನ ಅದ್ಭುತ ಸುಂದರ ವಿಷಯಗಳೆಲ್ಲಾ ಅಲ್ಲಿನ ಜನಗಳಿಗೆ ಅವರ ಅವರ ಪ್ರಾದೇಶಿಕ ಭಾಷೆಗಳಲ್ಲಿ ದೊರಕುತ್ತಿವೆ. ಈ ಭೂಮಿಯ ಮೇಲಿನ ಜೀವಜಗತ್ತಿನ ಅದ್ಭುತ ವೈವಿಧ್ಯತೆಗಳನ್ನು, ವೈಚಿತ್ರಗಳನ್ನು, ಅವುಗಳ ನಿಗೂಢ ಜೀವನ ಕ್ರಮಗಳನ್ನು ಹಾಗೂ ಅವುಗಳೆಲ್ಲಾ ಅಳಿವಿನಂಚೆಗೆ ಹೋಗುತ್ತಿರುವ ಭೀಕರತೆಗಳನ್ನೆಲ್ಲ ಜಗತ್ತಿನ ಎಲ್ಲ ಜನಗಳು ಅವರವರ ಮಾತೃಭಾಷೆಗಳಲ್ಲಿ ಅರಿತುಕೊಳ್ಳುವ ಅನಿವಾರ್ಯತೆ ಇದೆ.


ಆದರೆ ಅನಿಮಲ್ ಪ್ಲಾನೆಟ್, ನ್ಯಾಷನಲ್ ಜಿಯಾಗ್ರಫಿ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡ ಭಾಷೆಯಲ್ಲಿ ಪ್ರಸಾರವಾಗದೇ ಇರುವುದರಿಂದ ಅದರಲ್ಲಿನ ಜೀವ ವೈವಿಧ್ಯದ ಜ್ಞಾನ ಕನ್ನಡಿಗರನ್ನು ತಲುಪುತ್ತಿಲ್ಲ. ಆದ್ದರಿಂದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡದಲ್ಲಿ ಪ್ರಸಾರವಾಗಬೇಕೆಂದು ಕನ್ನಡಿಗರು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುನಿಲ್ ಕುಮಾರ್ ಅವರು ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ನಾಲ್ಕು ವಯೋವೃದ್ದರೊಂದಿಗೆ ಮಹಿಳೆಯ ಪ್ರೇಮದಾಟ! ಐದನೇ ಪ್ರೇಮಿ ಪ್ರವೇಶವಾಗುತ್ತಿದ್ದಂತೆ ಬಿತ್ತು ಹೆಣ


ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನದ ಹಲವು ಸ್ವರೂಪಗಳ ಆವಿಷ್ಕಾರದಿಂದಾಗಿ ಜಗತ್ತಿನಲ್ಲಿ ಅವರವರ ಭಾಷೆಯಲ್ಲಿಯೇ ಸೇವೆಗಳು ಮತ್ತು ಮಾಹಿತಿಗಳು ಲಭಿಸುತ್ತಿರುವ ಸಂದರ್ಭದಲ್ಲಿ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡದಲ್ಲಿ ಸೇವೆ ಒದಗಿಸಬಹುದಾಗಿದೆ. 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಹಾಗೂ 6 ಕೋಟಿಗೂ ಅಧಿಕ ಜನ ಮಾತಾನಾಡುವ, ಬಳಸುವ ಕನ್ನಡ ಭಾಷೆಯಲ್ಲಿ ಅನಿಮಲ್ ಪ್ಲಾನೆಟ್, ನ್ಯಾಷನಲ್ ಜಿಯಾಗ್ರಫಿ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಪ್ರಸಾರ ಮಾಡಿ ಕನ್ನಡಿಗರಿಗೆ ಭೂ ಜಗತ್ತಿನ ವಿಸ್ಮಯಗಳನ್ನು ತಮ್ಮ ಭಾಷೆಯಲ್ಲಿ ತಿಳಿದುಕೊಳ್ಳುವ ಅವಕಾಶ ಒದಗಿಸಲು ಸಂಬಂಧಪಟ್ಟವರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.