ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ- ಸಿಎಂ

 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.

Written by - Yashaswini V | Last Updated : Dec 28, 2023, 03:35 PM IST
  • ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ.
  • ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ.
  • ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ- ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ- ಸಿಎಂ  title=

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತಿ ಸಿದ್ದರಾಮಯ್ಯ ಹೇಳಿದ್ದಾರೆ. ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು ಎಂದವರು ಈ ವೇಳೆ ತಿಳಿಸಿದರು. 

ಕರ್ನಾಟಕದಲ್ಲಿ ಕನ್ನಡ ನಾಮಪಲಕ ಕಡ್ಡಾಯವನ್ನು ಆಗ್ರಹಿಸಿ  ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ ಎಂದು ಹೇಳಿದರು. 

ಸಿಎಂ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿ ಹೈಲೈಟ್ಸ್ ಈ ಕೆಳಕಂಡಂತಿದೆ:- 
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.  ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.

ಇದನ್ನೂ ಓದಿ-  ಕನ್ನಡಪರ ಹೋರಾಟಗಾರರ ಬಗ್ಗೆ ಗೌರವವಿದೆ, ಆದರೆ ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಸಹಿಸಲ್ಲ
 
ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆಯ ಮಾತುಗಳಾಡಿದರು. 

ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ, ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ ಎಂದಿದ್ದಾರೆ. 

3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. 
ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. 

ಇದನ್ನೂ ಓದಿ- ʼಅರ್ಜುನʼನ ಸಾವಿನ ಸುತ್ತ ಹಲವು ಪ್ರಶ್ನೆಗಳು..! ರಾಜರು, ಸಿಎಂ, ಡಿಸಿಎಂ ಎಲ್ಲಿ ಎಂದ ನೆಟ್ಟಿಗರು

ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ.  ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಸಿಎಂ ಇದೆ ಸಂದರ್ಭದಲ್ಲಿ ಮನವಿ ಮಾಡಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News