ಬೆಂಗಳೂರು : ಐಟಿ ಕಂಪನಿ ಸಂಸ್ಥಾಪಕರೊಬ್ಬರು ತಮ್ಮ ಕಚೇರಿಯನ್ನು 6 ತಿಂಗಳೊಳಗೆ ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. ಇದಕ್ಕೆ ಅವರು "ಭಾಷಾ ಅಸಂಬದ್ಧತೆ"ಯ ಅಂತ ಕಾರಣ ನೀಡಿದ್ದಾರೆ. ಅಲ್ಲದೆ, ತಮ್ಮ ಉದ್ಯೋಗಿಗಳನ್ನು ಕನ್ನಡಕ್ಕೆ ಬಲಿ ಪಶುಗಳಾಗುವುದು ಬೇಡ ಅಂತ ಹೇಳಿಕೊಂಡಿಕೊಂಡಿದ್ದಾರೆ..
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಉದ್ಯಮಿ ಕೌಶಿಕ್, "ಈ ಭಾಷಾ ಅಸಂಬದ್ಧತೆಯಿಂದ, ನನ್ನ ಕನ್ನಡ ಮಾತನಾಡದ ಸಿಬ್ಬಂದಿ ಮುಂದೆ 'ಬಲಿಪಶು'ಗಳಾಗುವುದನ್ನು ನಾನು ಬಯಸುವುದಿಲ್ಲ" ಎಂದು ಬರೆದಿದ್ದಾರೆ. ತಮ್ಮ ಉದ್ಯೋಗಿಗಳ ಕಳವಳದಿಂದ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಂದಾಪುರದ ಎಸ್‌ಬಿಐ ಬ್ಯಾಂಕ್ ಶಾಖೆಯ ಮ್ಯಾನೇಜರ್ ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದರು. ಅಲ್ಲದೆ, ಇದು ಭಾರತ, ನಾನು ಹಿಂದಿ ಮಾತನಾಡುತ್ತೇನೆ, ಕನ್ನಡವನ್ನಲ್ಲ ಎಂದು ದರ್ಪ ಮೆರೆದಿದ್ದರು. ಈ ಸಂವಾದದ ವಿಡಿಯೋ ವೈರಲ್ ಆಗಿತ್ತು. ಕನ್ನಡಪರ ಸಂಘಟನೆಗಳು ಮತ್ತು ರಾಜಕೀಯ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಯಿತು.
Today I took a decision to wind up our Bangalore office in the next 6 months and move it to Pune. If this language nonsense is to continue, I do not want my non Kannada speaking staff to be the next "victim".
This idea was mooted by the staff themselves.
I agreed to their POV. https://t.co/M9abD2OYOD— Kaushik Mukherjee ?? (@kush07) May 22, 2025
ಅಲ್ಲದೆ, ಈ ಘಟನೆ ಕುರಿತು ಸಂಸದ ತೇಜಸ್ವಿ ಸೂರ್ಯ, ವೀಡಿಯೊ ಹಂಚಿಕೊಂಡು ವ್ಯವಸ್ಥಾಪಕರ ನಡವಳಿಕೆಯನ್ನು "ಸ್ವೀಕಾರಾರ್ಹವಲ್ಲ" ಎಂದು ಪ್ರತಿಕ್ರಿಯೆ ನೀಡಿದ್ದರು. ಇದೀಗ ಉದ್ಯಮಿ ಕೌಶಿಕ್ ಮುಖರ್ಜಿ ಅವರ ಪೋಸ್ಟ್ ಅನ್ನು ಹಂಚಿಕೊಂಡು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ಇದನ್ನೂ ಓದಿ:ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಶಂಕಿತನ ಬಂಧನ
ಇನ್ನು ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ, ನೀವು ಕರ್ನಾಟಕದಲ್ಲಿ, ವಿಶೇಷವಾಗಿ ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡುತ್ತಿದ್ದರೆ, ಗ್ರಾಹಕರಿಗೆ ಗೊತ್ತಿರುವ ಭಾಷೆಯಲ್ಲಿ ಸಂವಹನ ನಡೆಸುವುದು ಮುಖ್ಯ" ಎಂದು ಬರೆದುಕೊಂಡಿದ್ದರು. ಅಲ್ಲದೆ, ರಾಜ್ಯದ ಬ್ಯಾಂಕುಗಳು ಮತ್ತು ಇತರ ಸಾರ್ವಜನಿಕ ಸಂಪರ್ಕ ಸಂಸ್ಥೆಗಳಲ್ಲಿ, ಸ್ಥಳೀಯ ಭಾಷಿಗ ಸಿಬ್ಬಂದಿಯನ್ನು ನೇಮಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂಬ ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಎಸ್‌ಬಿಐ ಉದ್ಯೋಗಿ ನಡವಳಿಕೆಯನ್ನು ಟೀಕಿಸಿ, ಬಲವಾಗಿ ಖಂಡಿಸಿದ್ದರು. ಅಲ್ಲದೆ, ಕೇಂದ್ರ ಹಣಕಾಸು ಸಚಿವಾಲಯವು ಬ್ಯಾಂಕಿಂಗ್ ಸಿಬ್ಬಂದಿಗೆ ದೇಶಾದ್ಯಂತ ಸಾಂಸ್ಕೃತಿಕ ಮತ್ತು ಭಾಷಾ ಸೂಕ್ಷ್ಮತೆಯ ತರಬೇತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









