ಧಾರವಾಡ : ಕರ್ನಾಟಕದ ಕಲೆ, ಸಂಸ್ಕೃತಿ ನಶಿಸಿ ಹೋಗಬಾರದೆಂದು ಸರ್ಕಾರವು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇವುಗಳ ಸದುಪಯೋಗವನ್ನು ಗ್ರಾಮೀಣ ಸೇರಿದಂತೆ ಎಲ್ಲ ಕಲಾವಿದರು ಸದುಪಯೋಗ ಪಡೆದುಕೊಂಡು ಕನ್ನಡವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸಾಮಾಜಿಕ ಹೋರಾಟಗಾರರಾದ ಲಕ್ಷ್ಮಣ ಬಕ್ಕಾಯಿ ಹೇಳಿದರು.
ಇದನ್ನೂ ಓದಿ: ಕರ್ನಾಟಕ ರಾಜ್ಯ ಕಾನೂನು ವಿವಿ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕ
ಇಂದು ಧಾರವಾಡ ರಂಗಾಯಣವು 66ನೇಯ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಧಾರವಾಡ, ಡಾ.ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಡಾ. ಮಲ್ಲಿಕಾರ್ಜುನ ಮನ್ಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಚಿತ್ರಕಲಾ ಶಿಲ್ಪಿ ಶ್ರೀ ಡಿ.ವಿ ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡ ಸಹಯೋಗದಲ್ಲಿ ಆಯೋಜಿಸಿದ್ದ ‘ಕನ್ನಡಕ್ಕಾಗಿ ನಾವು” ಕನ್ನಡ ರಾಜ್ಯೋತ್ಸವ ಅಭಿಯಾನದ ಮೂರನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ಇದನ್ನೂ ಓದಿ: ಸಾಕಪ್ಪ ಸಾಕು ಬೆಂಗಳೂರು.! ಲಾಕ್ ಡೌನ್ ಗೆ ಹೆದರಿ ಊರಿಗೆ ದೌಡಾಯಿಸುತ್ತಿರುವ ಜನ
ಭಾರತೀಯ ಕಲೆ,ಸಂಸ್ಕೃತಿಗಳ ಮೂಲ ಬೇರನ್ನು ಮುಂದಿನ ಪೀಳಿಗೆಯವರಿಗೆ ತೋರಿಸಿಕೊಡುವುದರೊಂದಿಗೆ ಅವುಗಳನ್ನು ಉನ್ನತ ಮಟ್ಟದಲ್ಲಿ ಬೆಳೆಸಬೇಕು. ನಮ್ಮ ಸಂಸ್ಕೃತಿ , ಕಲೆಗಳು ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚಾಗಿ ಕಂಡುಬರುವುದರಿಂದ ಅವಕಾಶ ಸಿಕ್ಕಾಗ ಸಮುದಾಯದ ಕಲೆಗಳನ್ನು ಪ್ರದರ್ಶನ ಮಾಡುವ ಮೂಲಕ ಜಾನಪದ ಕಲೆಗಳನ್ನು ಉಳಿಸುತ್ತಾ, ಕನ್ನಡವನ್ನು ವಿಸ್ತಾರಗೊಳಿಸಬೇಕು. ಮಕ್ಕಳಿಗೆ ನಮ್ಮ ಕಲೆಗಳ ಬಗ್ಗೆ ತಿಳುವಳಿಕೆ ನೀಡಿ, ಅವರಲ್ಲಿ ನಮ್ಮ ಸಂಸ್ಕೃತಿಯ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವಂತೆ ಪ್ರೇರಣೆ ನೀಡಬೇಕು ಎಂದರು.
ಇದನ್ನೂ ಓದಿ :ಸೋನಿಯಾ ಗಾಂಧಿ ಭೇಟಿ ಅಂತ್ಯ: ರಾಷ್ಟ್ರ ರಾಜಕೀಯಕ್ಕೆ ಹೋಗಲ್ಲವೆಂದ ಸಿದ್ದರಾಮಯ್ಯ
ನ್ಯಾಯವಾದಿ ಮಹಾದೇವ ದೊಡಮನಿ ಮಾತನಾಡಿ, ಇಂದಿನ ಪಾಲಕರು ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸದೇ ಆಂಗ್ಲ ಮಾಧ್ಯಮಕ್ಕೆ ಸೇರಿಸುವ ಮೂಲಕ ಕನ್ನಡವನ್ನು ಕಡೆಗಣಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕನ್ನಡವನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಕನ್ನಡಿಗರ ಪ್ರತಿಯೊಬ್ಬರ ಮೇಲೆ ಇದೆ. ಕಲಾವಿದರು ಕಲೆಗಳನ್ನು ಉಳಿಸುತ್ತಾ ಕನ್ನಡವನ್ನು ಬೆಳೆಸುತ್ತಿದ್ದಾರೆ ಎಂದು ಹೇಳಿದರು.
ರಂಗಾಯಣದ ನಿರ್ದೇಶಕರಾದ ರಮೇಶ ಎಸ್. ಪರವಿನಾಯ್ಕರ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ, ಕನ್ನಡ-ನಾಡು, ನುಡಿಯನ್ನು ನಮ್ಮ ಮುಂದಿನ ಪೀಳಿಗೆಯವರಿಗೂ ತಲುಪಿಸುವಲ್ಲಿ ಈ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಗ್ರಾಮೀಣ ಭಾಗದ ಮಹಿಳೆಯರು ಜಾನಪದ ಕಲೆಗಳಲ್ಲಿ ಹೆಚ್ಚು ಆಸಕ್ತಿಯನ್ನು ತೋರುವ ಮೂಲಕ ಮೇಲುಗೈ ಸಾಧಿಸಿದ್ದಾರೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಕಾಶ ಮಲ್ಲಿಗವಾಡ ಹಾಗೂ ತಂಡದವರು ನೃತ್ಯ ರೂಪಕವನ್ನು ಪ್ರಸ್ತುತಪಡಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.