ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೧೮, ೨೦೧೯, ೨೦೨೦, ೨೦೨೧, ೨೦೨೨ ಹಾಗೂ ೨೦೨೩ ನೇ ಸಾಲಿನ ʻಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ*ʼ ಯನ್ನು ಪ್ರಕಟಿಸಲಾಗಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ೬ ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದೇ ಇರುವುದರಿಂದ ಈ ಬಾರಿ ೬ ಜನ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನೂ ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

೨೦೧೮ನೇ ಸಾಲಿನ ʻ*ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ*ʼ ಪ್ರಶಸ್ತಿಗಾಗಿ ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿರುವ ಕೋಲಾರದ ಶ್ರೀ ಕೋಟಿಗಾನಹಳ್ಳಿ ರಾಮಯ್ಯ, ೨೦೧೯ನೇ ಸಾಲಿನ ಪ್ರಶಸ್ತಿಗೆ *ಕಲಬುರಗಿಯ ಡಾ. ಎಚ್. ಟಿ. ಪೋತೆ*, ೨೦೨೦ ನೇ ಸಾಲಿನ ಪ್ರಶಸ್ತಿಗಾಗಿ *ವಿಜಯಪುರದ ಶ್ರೀಮತಿ ಇಂದುಮತಿ ಲಮಾಣಿ*, ೨೦೨೧ನೇ ಸಾಲಿನ ಪ್ರಶಸ್ತಿಗಾಗಿ *ಬೆಂಗಳೂರಿನ ಡಾ. ಕಾ.ವೆಂ. ಶ್ರೀನಿವಾಸಮೂರ್ತಿ*, ೨೦೨೨ನೇ ಸಾಲಿನ ಪ್ರಶಸ್ತಿಗಾಗಿ *ಗದಗದ ಡಾ. ಅರ್ಜುನ ಗೊಳಸಂಗಿ* ಹಾಗೂ ೨೦೨೩ನೇ ಸಾಲಿನ ಪ್ರಶಸ್ತಿಯನ್ನು *ಹಾಸನದ ಶ್ರೀ ನಾಗರಾಜ ಹೆತ್ತೂರು* ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೊಹರಂ ನಿಮಿತ್ಯ ಹಾಕಿದ ಕೆಂಡದಲ್ಲಿ‌ ಕಂಬಳಿ‌ ಹಾಸಿ‌ ಕುಳಿತ ವ್ಯಕ್ತಿ..!


*ಶ್ರವಣಬೆಳಗೊಳದಲ್ಲಿ ನಡೆದ ೮೧ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿಗಾಗಿ ಆ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು* ದತ್ತಿ ನಿಧಿಯನ್ನು ಸ್ಥಾಪಿಸಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಬೇಕು ಎನ್ನುವುದು ದತ್ತಿಯ ಮೂಲ ಆಶಯವಾಗಿದೆ. ಪ್ರಸ್ತುತ ʻ*ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼಗೆ* ಆಯ್ಕೆಯಾಯಾಗಿರುವ ಎಲ್ಲಾ ಸಾಹಿತ್ಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸಿ ಅವರ ಸಾಹಿತ್ಯ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತದೆ. ಕನ್ನಡ ನಾಡಿನಲ್ಲಿ ದಲಿತ ಸಾಹಿತ್ಯ ಕ್ಷೇತ್ರಗಳಲ್ಲಿ ಅಪರಿಮಿತ ಸಾಧನೆ ಮಾಡಿರುವ ಗಣ್ಯರನ್ನು ಸೂಕ್ಷ್ಮವಾಗಿ ಗುರುತಿಸಿ ಪರಿಷತ್ತು ಸ್ಥಾಪಿಸಿರುವ ಈ ದತ್ತಿ ಆಶಯಕ್ಕೆ ಯಾವುದೇ ಚ್ಯುತಿಯಾಗದ ರೀತಿಯಲ್ಲಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ ಎಂದು *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ. ಮಹೇಶ ಜೋಶಿ* ಅವರು ಹೇಳಿದ್ದಾರೆ.


ಇದನ್ನೂ ಓದಿ: ಸೀಬೆ ಹಣ್ಣಿನ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜಗಳಿವೆ ಗೊತ್ತಾ..?


ಕೊರೋನಾ ಸೇರಿದಂತೆ ಇತರ ಕಾರಣಗಳ ಹಿನ್ನೆಲೆಯಲ್ಲಿ ಕಳೆದ ೬ ವರ್ಷಗಳಿಂದ ʻ*ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ*ʼ ಪ್ರಶಸ್ತಿಯ ಪ್ರಕಟಣೆ ಬಾಕಿ ಇತ್ತು. ಪ್ರಸ್ತುತ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷರ ಅವಧಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ವರ್ಷಗಳ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಪ್ರಶಸ್ತಿಯು ೧೦,೦೦೦(ಹತ್ತು ಸಾವಿರ)ರೂ. ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿರುತ್ತದೆ. ಇದುವರೆಗೆ ಇಬ್ಬರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.


ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಶ್ರೀಮತಿ ರಮಾಕುಮಾರಿ, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು* ಅವರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.