ಬೆಂಗಳೂರು: ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


COMMERCIAL BREAK
SCROLL TO CONTINUE READING

ಅವರು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.


ಇದನ್ನೂ ಓದಿ:ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ: 02 ಬಾಲಕಾರ್ಮಿಕರ ರಕ್ಷಣೆ


87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸಬೇಕು ಹಾಗೂ ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಬೇಕು, ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂದು ಅವರು ಹೇಳಿದರು.


ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳಲು ಇದೇ ಪ್ರಮುಖ ಕಾರಣವೇ! 


ಈ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ.ಗಳ ಅನುದಾನ ಒದಗಿಸಲು ಪರಿಷತ್ ಅಧ್ಯಕ್ಷರು ಮನವಿ ಸಲ್ಲಿಸಿದರು. 


ಜಿಲ್ಲಾ ಉಸ್ತುವಾರಿ ಸಚಿವ ಚೆಲುವನಾರಾಯಣಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ,  ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.