ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಫೆಬ್ರವರಿ 28 ರೊಳಗಾಗಿ ಶೇ. 60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆಯ ಜೊತೆ ಮಲ್ಲೇಶ್ವರಂ ಐಪಿಪಿ ಸಭಾಂಗಣದಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಮಾಲ್ ಸೇರಿದಂತೆ ಇನ್ನಿತರೆ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಸಂಬಂಧ ಎಲ್ಲಾ ವಲಯ ಆಯುಕ್ತರ ಜೊತೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗುವುದೆಂದು ಹೇಳಿದರು.
ನಗರದಲ್ಲಿ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು 1400 ಕಿ.ಮೀ ನಷ್ಟಿದ್ದು, ಸದರಿ ರಸ್ತೆಗಳಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ವಲಯವಾರು ಸರ್ವೆ ಮಾಡಿಸಲಾಗುವುದು. ಸರ್ವೇಯ ನಂತರ ಶೇ. 60 ರಷ್ಟು ಕನ್ನಡ ಭಾಷೆ ಬಳಸದ ಮಳಿಗೆಗಳಿಗೆ ನೋಟೀಸ್ ನೀಡಲಾಗುವುದು. ನೋಟೀಸ್ ನಿಡಿದ ಬಳಿಕ ಫೆಬ್ರವರಿ 28 ರವರೆಗೆ ಸಮಯಾವಕಾಶ ನೀಡಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿ ಅನುಷ್ಠಾನಗೊಳಿಸಿ ಆಯಾ ವಲಯ ಆಯುಕ್ತರಿಗೆ ಅನುಪಾಲನೆ ಸಲ್ಲಿಸಬೇಕೆಂದು ಸೂಚಿಸಲಾಗುವುದೆಂದು ತಿಳಿಸಿದರು.
ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ಗೆ ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್‌ನಿಂದ ಪ್ರಶಂಸೆ: ಬೆಂಗಳೂರಿಗರಿಗೆ ಅಭಿನಂದಿಸಿದ ಪ್ರಧಾನಿ!
ನಗರದಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಪಾಲಿಕೆ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.
ಫೆಬ್ರವರಿ 28ರೊಳಗಾಗಿ ಕನ್ನಡ ನಾಮಫಲಕಗಳನ್ನು ಅಳವಡಿಕೊಳ್ಳದ ಅಂಗಡಿ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಅದರಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸದ ಅಂಗಡಿ ಮುಂಗಟ್ಟುಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು ತದನಂತರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಜೊತೆಗೆ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಯ ಮೇಲೂ ಶಿಸ್ತು ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.
ನಗರದಲ್ಲಿ ಬರುವ ದೊಡ್ಡ ದೊಡ್ಡ ಮಾಲ್ ಗಳ ಜೊತೆ ಕೂಡಲೆ ಸಮಾಲೋಚನೆ ನಡೆಸಿ ಮಾಲ್ ಗಳಲ್ಲಿರುವ ಎಲ್ಲಾ ಮಳಿಗೆಗಳಲ್ಲಿ 15-20 ದಿನಗಳೊಳಗಾಗಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಬಿ.ವೈ.ವಿಜಯೇಂದ್ರ ಹೇಳಿದ್ದೇನು?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.