ಕನ್ನಡದ ಹಿರಿಯ ಸಾಹಿತಿ, ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ

ಕನ್ನಡದ ಹಿರಿಯ ಸಾಹಿತಿ (Kannada veteran literature), ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ (93) ಇಹಲೋಕ ತ್ಯಜಿಸಿದ್ದಾರೆ.

Written by - Prashobh Devanahalli | Edited by - Chetana Devarmani | Last Updated : Feb 16, 2022, 11:22 AM IST
  • ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ
  • ಕನ್ನಡದ ಹಿರಿಯ ಸಾಹಿತಿ ನಾಡೋಜ ಚೆನ್ನವೀರ ಕಣವಿ
  • ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಸಾಹಿತಿ
ಕನ್ನಡದ ಹಿರಿಯ ಸಾಹಿತಿ, ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ  title=
ಚೆನ್ನವೀರ ಕಣವಿ

ಧಾರವಾಡ: ಕನ್ನಡದ ಹಿರಿಯ ಸಾಹಿತಿ (Kannada veteran literature), ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ (93) ಇಹಲೋಕ ತ್ಯಜಿಸಿದ್ದಾರೆ. ಇದು ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಬರಸಿಡಿಲು ಬಡಿದಂತಾಗಿದೆ. 

ಇದನ್ನೂ ಓದಿ: Bappi Lahiri Dies: ಹಿರಿಯ ಸಂಗೀತ ಸಂಯೋಜಕ ಬಪ್ಪಿ ಲಾಹಿರಿ ವಿಧಿವಶ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಸಾಹಿತಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  

ಕವಿ ನಾಡೋಜ ಡಾ.ಚೆನ್ನವೀರ ಕಣವಿ  (Chennaveera Kanavi) ಅವರು ಕಳೆದೊಂದು ತಿಂಗಳಿನಿಂದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೋವಿಡ್‍ನಿಂದ (Corona) ಸಂಪೂರ್ಣ ಗುಣಮುಖರಾಗಿದ್ದ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಚೆನ್ನವೀರ ಕಣವಿ ಅವರು ಸುಮಾರು ಒಂದು ತಿಂಗಳಿನಿಂದ ಎಸ್​ಡಿಎಂ (SDM Hospital) ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Bommai), ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಚೆನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದ್ದರು. 

ಅಕ್ಯೂಟ್​ ರೆಸ್ಪಿರೇಟರಿ ಡಿಸ್ಟ್ರೆಸ್​ ಸಿಂಡ್ರೋಮ್​ನಿಂದ ಚೆನ್ನವೀರ ಕಣವಿ ಬಳಲುತ್ತಿದ್ದರು. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ಕಣವಿ ಅವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು. ಆ ನಂತರ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಕೆಲದಿನಗಳ ಬಳಿಕ ಮತ್ತೆ ಆರೋಗ್ಯ ಕ್ಷೀಣಿಸಿತ್ತು. ಇಂದು ಅವರು ವಿಧಿವಶರಾಗಿದ್ದಾರೆ.

ಇದನ್ನೂ ಓದಿ: Deep Sidhu: ಕೆಂಪು ಕೋಟೆ ಗಲಭೆ ಆರೋಪಿ, ಪಂಜಾಬಿ ನಟ ದೀಪ್ ಸಿಧು ಅಪಘಾತದಲ್ಲಿ ದುರ್ಮರಣ

ಡಾ.ಚನ್ನವೀರ ಕಣವಿ ಅವರ ಅಂತ್ಯಕ್ರಿಯೆ (Kanavi Funeral) ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಸೃಷ್ಟಿ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ಗೆ ಸಿದ್ದತೆ ನಡೆಸಲಾಗುತ್ತಿದೆ. ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ಸಿದ್ಧತೆ ನಡೆಸುತ್ತಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News